ಸುದ್ದಿ

ಎಂ.ಕೃಷ್ಣಪ್ಪಗೆ ಸಚಿವ ಸ್ಥಾನ ಮಿಸ್ : ಪ್ರತಿಭಟನೆ ನಡೆಸುತ್ತಿದ್ದ ಅಭಿಮಾನಿಗಳ ಮೇಲೆ FIR

Share It

ಬೆಂಗಳೂರು: ವಿಜಯನಗರ ಶಾಸಕ ಎಂ ಕೃಷ್ಣಪ್ಪ ಅವರಿಗೆ ಸಚಿವ ಸ್ಥಾನ ಸಿಗದಿರುವ ಕಾರಣಕ್ಕೆ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದು, ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.

ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಗೂ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಘೋಷಣೆ ಕೂಗಿದ್ದರು ಎಂಬ ಕಾರಣಕ್ಕೆ ಎಫ್‌ಐಆರ್ ದಾಖಲಾಗಿದೆ ಎಂದು ಹೇಳಲಾಗುತ್ತಿದೆ.

ಪೊಲೀಸರ ಕ್ರಮವನ್ನು ಖಂಡಿಸಿ, ಮತ್ತಷ್ಟು ಹೆಚ್ಚಿನ ಕಾರ್ಯಕರ್ತರು ಸೇರಿ ಪ್ರತಿಭಟನೆ ಮುಂಧುವರಿಸಿದ್ದು, ಕೃಷ್ಣಪ್ಪ ಮತ್ತು ಪ್ರಿಯಕೃಷ್ಣ ಅವರಲ್ಲಿ ಒಬ್ಬರಿಗೆ ಸಚಿವ ಸ್ಥಾನ ಕೊಡಬೇಕಿತ್ತು. ಆದರೆ, ಪಕ್ಷ ಅವರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Share It

You cannot copy content of this page