ಬೆಂಗಳೂರು: ಪ್ರಸ್ತುತ cwrc ನೀಡಿರುವ ಆದೇಶ ರಾಜ್ಯ ಸರಕಾರದ ಪಾಲಿಗೆ ದುಬಾರಿಯಾಗಿದ್ದು, ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು, ಆನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಜತೆಗೆ ಸಭೆ ನಡೆಸಿ crwc ಆದೇಶದ ವಿರುದ್ಧ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ. ಕಾನೂನು ತಜ್ಞರ ಜತೆಗೂ ಚರ್ಚೆ ನಡೆಸಿದ್ದು, ದೆಹಲಿಯ ಕಾನೂನು ತಂಡದ ಜತೆಗೆ ಸಭೆ ನಡೆಸಲಾಗಿದೆ. ಇದಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದರು.
Cwrc ನೀಡಿರುವ ತೀರ್ಪಿನ ಜತೆಗೆ ತಮಿಳುನಾಡು ಸರಕಾರ ಸಲ್ಲಿಸಿರುವ ಅರ್ಜಿ ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ. ರಾಜ್ಯದ ವಾದ ಮಂಡನೆ ಮಾಡಲು ಅವಕಾಶವಿದೆ. ಹೀಗಾಗಿ, ಸುಪ್ರೀಂ ಕೋರ್ಟ್ ತೀರ್ಮಾನ ಏನಾಗಲಿದೆ ಎಂಬುದನ್ನು ನೋಡಿಕೊಂಡು ಮುಂದಿನ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.
ರಾಜ್ಯದ ಪರಿಸ್ಥಿತಿ ಚೆನ್ನಾಗಿಲ್ಲ, ಮಳೆಯ ಪ್ರಮಾಣ ಕಡಿಮೆಯಾಗಿದೆ. ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಆದರೆ, ತಮಿಳುನಾಡು ದಂ ಗಳಲ್ಲಿ ಸಾಕಷ್ಟು ನೀರಿದೆ. ಅಲ್ಲಿ ಹಿಂಗಾರು ಮಳೆ ಕೂಡ ಈಗ ಆರಂಭವಾಗುತ್ತೆ, ಇದೆಲ್ಲವನ್ನು CWRC ಮುಂದೆ ತಂದರು ಆದೇಶ ಮಾಡಲಾಗಿದೆ. ಆದೇಶ ನಮ್ಮ ಪಾಲಿಗೆ ದುಬಾರಿಯಾಗಿದೆ ಎಂದು ತಿಳಿಸಿದರು.
ಕಾವೇರಿ ವಿಚಾರದಲ್ಲಿ ಬಂದ್ ಸಹಜ : ರಾಜ್ಯದಲ್ಲಿ ನಡು ನುಡಿ ವಿಚಾರ ಬಂದಾಗ ಬಂದ್ ನಡೆಸುವುದು ಸಹಜ. ಕನ್ನಡ ಪರ ಸಂಘಟನೆಗಳು ಮತ್ತು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ನಾವು ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.

