ಬೆಂಗಳೂರು: ಈಗಾಗಲೇ ವಿಧಾನಸೌಧದ ಆವರಣದಲ್ಲಿ ಪ್ರತಿಮೆಗಳ ಪರ್ವವೇ ಇದ್ದು, ಮತ್ತೊಂದು ಪ್ರತಿಮೆ ನಿರ್ಮಾಣಕ್ಕೆ ಸದ್ದಿಲ್ಲದೆ ಸರಕಾರ ಸಿದ್ಧತೆ ನಡೆಸಿದೆ.
ವಿಕಾಸಸೌಧದ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಪ್ರತಿಮೆ ಸ್ಥಾಪಿಸುವಂತೆ ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ವಿಧಾನ ಪರಿಷತ್ ಸದಸ್ಯರಾದ ಕೆ ಗೋವಿಂದರಾಜ್ ಅವರು ಶುಕ್ರವಾರ ಮನವಿ ಪತ್ರ ಸಲ್ಲಿಸಿದರು.
ಮನವಿ ಸ್ವೀಕಾರ ಮಾಡಿದ ಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ರಾಜಕೀಯ ಗುರು ಹಾಗೂ ಸಂಬಂಧಿ ಎಸ್ ಎಂ ಕೃಷ್ಣ ಅವರ ಪ್ರತಿಮೆ ನಿರ್ಮಾಣಕ್ಕೆ ಅಸ್ತು ಎನ್ನಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಈಗಾಗಲೇ ವಿಧಾನಸೌಧದ ಆವರಣದಲ್ಲಿ ಅನೇಕ ಮಾಜಿ ಸಿಎಂ ಗಳ ಪ್ರತಿಮೆ ನಿರ್ಮಾಣ ಮಾಡಲಾಗಿದೆ.
ಇದೀಗ ವಿಕಾಸ ಸೌಧ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂಬ ಕಾರಣಕ್ಕೆ ಎಸ್ ಎಂ ಕೃಷ್ಣ ಅವರ ಪ್ರತಿಮೆಯನ್ನು ವಿಕಾಸ ಸೌಧದಲ್ಲಿ ನಿರ್ಮಾಣ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎ ಗೋವಿಂದ ರಾಜ್ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

