ಚಾಮರಾಜನಗರ: ಅರಣ್ಯ ಇಲಾಖೆಯ ಶೂಟ್ ಔಟ್ ಖಂಡಿಸಿ, ಗ್ರಾಮಸ್ಥರು ಮತ್ತು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಹನೂರು ತಾಲೂಕಿನ ಶಾಗ್ಯ ಗ್ರಾಮದ ಡಿಆರ್‌ಎಫ್‌ಒ ಕಚೇರಿ ಬಳಿ ಜಮಾಯಿಸಿದ ಜನರು, ಎಪಿಸಿ ಕ್ಯಾಂಪ್‌ಗೂ ನುಗ್ಗಿ ದಾಂಧಲೆ ನಡೆಸಿದ್ದಾರೆ. ಈಗ ಕಚೇರಿಯ ಮುಂದೆ ಕುಳಿತು ಧರಣಿ ನಡೆಸುತ್ತಿದ್ದಾರೆ.
ಪ್ರತಿಭಟನೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಪಿ.ಮಳವಳ್ಳಿಯಿಂದ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಮಂಡ್ಯ ಮತ್ತು ಮೈಸೂರಿನಿಂದಲೂ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

