ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯವಾಗಿವೆ
ಬೆಂಗಳೂರು: ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದ್ದು, ತನಿಖೆ ಬಳಿಕ ಸಂಪೂರ್ಣ ಮಾಹಿತಿ ನೀಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದರು.
ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.
ಹನೂರಿನಲ್ಲಿ ಶೂಟೌಟ್ ಬಗ್ಗೆ ಕೇಳಿದಾಗ, “ಈ ಬಗ್ಗೆ ಬೆಳಗ್ಗೆ 5 ಗಂಟೆಗೆ ಮಾಹಿತಿ ಬಂದಿದೆ. ತನಿಖೆ ಬಳಿಕ ವಾಸ್ತವಾಂಶ ತಿಳಿಯುತ್ತದೆ. ಅರಣ್ಯ ಪ್ರದೇಶದಲ್ಲಿ ಶೂಟೌಟ್ ನಡೆದಿದ್ದು, ಅನೇಕ ಸಾಕ್ಷಿಗಳು ವಸ್ತುಗಳು, ಬಂದೂಕು ವಶಪಡಿಸಿಕೊಳ್ಳಲಾಗಿದೆ. ಮಾಧ್ಯಮಗಳು ಕೆಲವು ವಿಚಾರ ಪ್ರಸಾರ ಮಾಡುತ್ತಿವೆ. ಕೆಲವರನ್ನು ಬಂಧಿಸಲಾಗಿದ್ದು, ಶವ ಪರೀಕ್ಷೆಗೆ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

