ಬೆಂಗಳೂರು: ವಿಮಾನ ನಿಲ್ದಾಣ ರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಕಾರು ಪಲ್ಟಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ವೇಗವಾಗಿ ಬರುತ್ತಿದ್ದ ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಬೈಕ್‌ಗೆ ಗುದ್ದಿದ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ.
ಕಾರು ಗುದ್ದಿದ ರಭಸಕ್ಕೆ ರಸ್ತೆಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ. ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

