ಅಪರಾಧ ಸುದ್ದಿ

ನಾಗೇಂದ್ರ ರಾಜೀನಾಮೆ ನೀಡುವ ತನಕ ಸದನ ನಡೆಯಲ್ಲ: ಬಿಜೆಪಿ ಪಟ್ಟು

Share It

ಬೆಂಗಳೂರು: ವಾಲ್ಮಿಕಿ ನಿಗಮದ ಹಗರಣದಲ್ಲಿ ಅರೆಸ್ಟ್‌ ಆಗಿದ್ದ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ತನಕ ಸದನವನ್ನು ನಡೆಸಲು ಬಿಡುವುದಿಲ್ಲ ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.

ವಿಧಾನಸೌಧದಲ್ಲಿ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಬಿ. ನಾಗೇಂದ್ರ ಅವರಿಗೆ ಯಾವುದೇ ಕ್ಲಿನ್ ಚಿಟ್ ನೀಡಲಾಗಿಲ್ಲ. ಆದರೂ, ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಅವರನ್ನು ಸಂಪುಟದಿಂದ ಕೈಬಿಡುವ ತನಕ ನಾವು ಸದನ ನಡೆಸಲು ಬಿಡುವುದಿಲ್ಲ ಎಂದು ಹೇಳಿದರು.

ವಾಲ್ಮಿಕಿ ನಿಗಮದ ಹಗರಣದಲ್ಲಿ ನಾಗೇಂದ್ರ ಜತೆಗೆ ಸಿಎಂ ಡಿ.ಕೆ.ಶಿವಕುಮಾರ್ ಅವರ ಹೆಸರು ಕೂಡ ಕೇಳಿಬಂದಿತ್ತು. ಈಗ ಆತ ತಮ್ಮ ಹೆಸರು ಹೇಳಬಾರದು ಎಂಬ ಕಾರಣಕ್ಕೆ ಸಚಿವ ಸ್ಥಾನ ನೀಡಲಾಗಿದೆ. ಆದರೆ, ರಾಜೀನಾಮೆ ಪಡೆಯುವವರೆಗೆ ನಾವು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.


Share It

You cannot copy content of this page