ಉಪಯುಕ್ತ ಸುದ್ದಿ

ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ :  ಹೆಸರಿನ ಹಿಂದೆ Tr” (Teacher)  ಶೀರ್ಷಿಕೆ ಬಳಸಲು  ಅನುಮತಿ

Share It

ಬೆಂಗಳೂರು: ರಾಜ್ಯದ ಎಲ್ಲಾ ಶಿಕ್ಷಕರು ತಮ್ಮ ಹೆಸರಿನ ಹಿಂದೆ ಹೆಮ್ಮೆಯಿಂದ “Tr.” (Teacher) ಎಂಬ ಪೂರ್ವಪ್ರತ್ಯಯ ಶೀರ್ಷಿಕೆಯನ್ನು ಬಳಸಲು ಅಧಿಕೃತವಾಗಿ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಪರಮೇಶ್ವರ ಪ್ರಕಟಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಕರ ನಿಸ್ವಾರ್ಥ ಸೇವೆ ಮತ್ತು ಕೊಡುಗೆಯನ್ನು ಗೌರವಿಸುವ ಸಲುವಾಗಿ, ರಾಜ್ಯ ಸರ್ಕಾರವು ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿಗಳು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ ಎಂದು ತಿಳಿಸಿದರು.

ಕರ್ನಾಟಕದ ಸುಮಾರು 4.5 ಲಕ್ಷ ಶಿಕ್ಷಕರು ನಮ್ಮ ಮಕ್ಕಳ ಭವಿಷ್ಯ ರೂಪಿಸುವ ಮಹತ್ಕಾರ್ಯದಲ್ಲಿ ತೊಡಗಿದ್ದಾರೆ. ಇವರ ನಿಸ್ವಾರ್ಥ ಸೇವೆ ಮತ್ತು ಕೊಡುಗೆಯನ್ನು ಗೌರವಿಸುವ ಸಲುವಾಗಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇದಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಒಪ್ಪಿಗೆ ನೀಡಿ, ಅಧಿಕೃತವಾಗಿ ಪ್ರಕಟಿಸಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಲಾಖೆ ಈ ಸಂಬಂಧ ಈಗಾಗಲೇ ಆದೇಶ ಹೊರಡಿಸಿದೆ ಎಂದು ಅವರು ಹೇಳಿದ್ದಾರೆ.


Share It

You cannot copy content of this page