ಸುದ್ದಿ

ಭವಿಷ್ಯ ಬೆಳಕು ಚಾರಿಟಬಲ್ ಟ್ರಸ್ಟ್ ವತಿಯಿಂದ ಸ್ವಯಂ ಸೇವಕರಿಗೆ ವಿಶೇಷ ತರಬೇತಿ ಕಾರ್ಯಕ್ರಮ ಯಶಸ್ವಿ

Share It


ಬೆಂಗಳೂರು: ಬೆಂಗಳೂರಿನ ಪ್ರಧಾನ ಕಚೇರಿಯಲ್ಲಿ ಇಂದು ‘ಭವಿಷ್ಯ ಬೆಳಕು ಚಾರಿಟಬಲ್ ಟ್ರಸ್ಟ್’ ವತಿಯಿಂದ ರಾಯಚೂರು, ಕಲಬುರಗಿ (ಗುಲ್ಬರ್ಗ) ಹಾಗೂ ವಿಜಯಪುರ (ಬಿಜಾಪುರ) ಜಿಲ್ಲೆಗಳಿಂದ ಆಯ್ಕೆಯಾದ ಸ್ವಯಂ ಸೇವಕರಿಗಾಗಿ ವಿಶೇಷ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಟ್ರಸ್ಟಿನ ಅಧ್ಯಕ್ಷರಾದ ಗಿರೀಶ್ ನಲ್ಕುದ್ರಿ ಅವರು, ಸರಕಾರಿ ಶಾಲೆಗಳ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ‘ವಿದ್ಯಾಂಜಲಿ 2.0’, ‘ನಮ್ಮ ಶಾಲೆ ನಮ್ಮ ಕೊಡುಗೆ’ ಹಾಗೂ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳ ಕುರಿತು ಸ್ವಯಂ ಸೇವಕರಿಗೆ ವಿವರವಾದ ತರಬೇತಿ ಹಾಗೂ ಮಾರ್ಗದರ್ಶನ ನೀಡಿದರು.
ಶಿಕ್ಷಣ ಕ್ಷೇತ್ರದ ಸಬಲೀಕರಣದಲ್ಲಿ ಮತ್ತು ಶಾಲೆಗಳ ಮೂಲಭೂತ ಅಭಿವೃದ್ಧಿಯಲ್ಲಿ ಸ್ವಯಂ ಸೇವಕರ ಪಾತ್ರ ಅತ್ಯಂತ ಪ್ರಮುಖವಾದುದು ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.
ಈ ತರಬೇತಿ ಕಾರ್ಯಕ್ರಮದಲ್ಲಿ ರಾಜ್ಯ ಸಂಯೋಜಕರಾದ ಶಿವರಾಜ್ ಹಾಗೂ ಪವನ್ ಕುಮಾರ್ ಉಪಸ್ಥಿತರಿದ್ದು, ಕಾರ್ಯಕ್ರಮದ ರೂಪುರೇಷೆಗಳ ಕುರಿತು ಮಾಹಿತಿ ನೀಡಿದರು.
ಜೊತೆಗೆ ಕಲಬುರಗಿ ಜಿಲ್ಲೆಯಿಂದ ಪ್ರಕಾಶ್, ನಂದಕುಮಾರ್, ಸ್ವಯಂ ಸೇವಕಿ ಪದ್ಮ, ಹಾಗೂ ಸಿಂಧನೂರಿನಿಂದ ಶೇಖರ್ ಗೌಡ್ರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಉತ್ಸಾಹಿ ಸ್ವಯಂ ಸೇವಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ತರಬೇತಿಯನ್ನು ಪಡೆದರು.


Share It

You cannot copy content of this page