ಬೆಂಗಳೂರು: ಬಿಟಿಎಂ ಲೇಔಟ್ ವ್ಯಾಪತೋಯ ಸರಕಾರಿ ಶಾಲೆಗಳು ಸೇರಿದಂತೆ ವಿದ್ಯಾರ್ಥಿಗಳ ಉಚಿತ ಕಣ್ಣಿನ ಪರೀಕ್ಷಾ ಶಿಬಿರವನ್ನು ಅರಣ್ಯ ಹಾಗೂ ಪರಿಸರ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟಿಸಿದರು.
ಆಡುಗೋಡಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಉದ್ಘಾಟನ ಕಾರ್ಯಕ್ರಮಾಡಲ್ಲಿ ಭಾಗವಹಿಸಿದ್ದ ಅವರು, ಉಚಿತ ಕನ್ನಡಕಗಳನ್ನು ವಿತರಣೆ ಮಾಡಿದರು. ಬಿ.ಟಿ.ಎಂ. ವಿಧಾನಸಭಾ ಕ್ಷೇತ್ರದ 22 ಸರ್ಕಾರಿ ಶಾಲೆಗಳು, ಸರ್ಕಾರಿ ಪದವಿಪೂರ್ವ ಕಾಲೇಜುಗಳು ಹಾಗೂ ಅನುದಾನಿತ ಶಾಲೆಯ ವಿದ್ಯಾರ್ಥಿಗಳಿಗಾಗಿ ಉಚಿತ ನೇತ್ರ ತಪಾಸಣೆ ಮತ್ತು ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮಂಡ ದೃಷ್ಟಿಯ ಸಮಸ್ಯೆವಿರುವ ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಉಚಿತ ಕನ್ನಡಕ ವಿತರಣೆ ಮಾಡಲಾಯಿತು. ಮುಂದಿನ ದಿನಗಳಲ್ಲಿ ಅಗತ್ಯವಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅವರ ಶಾಲಾ, ಕಾಲೇಜುಗಳಲ್ಲಿ ಕಣ್ಣಿನ ತಪಾಸಣೆ ನಡೆಸಿ, ಕನ್ನಡಕಗಳನ್ನು ವಿತರಿಸಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದರು.
ಈ ಆರೋಗ್ಯ ಅಭಿಯಾನ ಯಶಸ್ವಿಯಾಗಿರಲು ಕೈಜೋಡಿಸಿದ ಲಯನ್ಸ್ ಕ್ಲಬ್, ನಾರಾಯಣ ನೇತ್ರಾಲಯ, ಬಾಂಧವ, ಟೀಮ್ ಆರ್.ಎಲ್.ಆರ್., ಉಕೃತಿ ಎನ್ಜಿಒ ಹಾಗೂ ಶ್ರೀನಿವಾಸ ಹೆಲ್ತ್ ಕೇರ್ ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದ್ದರು.
