ನವದೆಹಲಿ: ನೈಸ್ ಅಕ್ರಮದ ವಿರುದ್ಧ ತನಿಖೆಯ ಅಗತ್ಯವಿದೆ ಎಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಪ್ರಕರಣದ ಸಮಗ್ರ ತನಿಖೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಆ ಮೂಲಕ ನೈಸ್ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದೆ.
ನೈಸ್ ಸಂಸ್ಥೆಯ ವಿರುದ್ಧ ತನಿಖೆ ಮತ್ತು ವಿಚಾರಣೆಗೆ ಆದೇಶ ನೀಡುವ ಮೂಲಕ ನೈಸ್ ವ್ಯಾಪ್ತಿಯ ರೈತರಿಗೆ ಹೈಕೋರ್ಟ್ ರಿಲೀಫ್ ನೀಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ನೈಸ್ ಸಂಸ್ಥೆ ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದು, ಮೇಲ್ಮನವಿ ತಿರಸ್ಕರಿಸಿರುವ ಸುಪ್ರೀಂ ಕೋರ್ಟ್ ವಿಚಾರಣೆಗೆ ಅವಕಾಶ ನೀಡಿದೆ.
ನೈಸ್ ಮಂಡಿಸಿದ್ದ ಯಾವುದೇ ವಾದಗಳನ್ನು ಗಣನೆಗೆ ತೆಗೆದುಕೊಳ್ಳದ ನ್ಯಾಯಾಲಯ ವಿಚಾರಣೆ ನಡೆಸದೆ ಮದ್ಯಂತರ ತಡೆ ನೀಡಲು ಸಾಧ್ಯವಿಲ್ಲ, ಹೈಕೋರ್ಟ್ ಆದೇಶದಂತೆ ವಿಚಾರಣೆ ನಡೆಯಲಿ ಎಂದು ಅಭಿಪ್ರಾಯಪಟ್ಟಿದ್ದು, ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಿದೆ.
