ನವದೆಹಲಿ: ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್ರೋಚ್ ಪ್ರತಿಭಟನೆ ನಡೆಸುತ್ತಿದ್ದು, ಮುಖಂಡ ಅಭಿಜೀತ್ ದೀಪ್ಕೆ ಅವರನ್ನು ಬಂಧಿಸಲು ಸರಕಾರ ಸಿದ್ಧತೆ ನಡೆಸಿದೆ ಎಂದು ವರದಿಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 10 ರಿಂದ ಪ್ರತಿಭಟನೆಗಳು ಮತ್ತಷ್ಟು ಜೋರಾಗುವ ಸಾಧ್ಯತೆಗಳಿವೆ.
ಟೈಮ್ ಆಪ್ ಇಂಡಿಯಾ ವರದಿಯ ಪ್ರಕಾರ ಅಭಿಜಿತ್ ದೀಪ್ಕೆ ಬಂಧನಕ್ಕೆ ಸರಕಾರ ಸಿದ್ಧತೆ ನಡೆಸುತ್ತಿದ್ದು, ಇದರಿಂದ ಆಗುವ ಪರಿಣಾಮಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಬಂಧನದ ನಂತರ ಪ್ರತಿಭಟನೆ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿದ್ದು, ಇದನ್ನು ತಡೆಯಲು ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚಿಂತನೆ ನಡೆದಿದೆ ಎಂದು ವರದಿಗಳು ತಿಳಿಸಿವೆ.
ಅಭಿಜಿತ್ ದೀಪಕೆ ನೇತೃತ್ವದಲ್ಲಿ ಚುನಾವಣ ಆಯುಕ್ತರ ವಿಜೆ ಹಾಗು ಬಂಧನಕ್ಕೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಆರಂಭವಾಗಿದೆ. ದೇಶದ ವಿವಿಧ ಮೂಲೆಗಳಿಂದ ಯುವ ಜನತೆಗೆ ಪ್ರತಿಭಟನೆಗೆ ಆಗಮಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಪ್ರತಿಭಟನೆ ಊರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ದೀಪ್ಕೆ ಬಂಧನಕ್ಕೆ ಸರಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
