ಬೆಂಗಳೂರು:ಸಚಿವ ಸಂಪುಟ ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಸಂಬಂಧ ಚರ್ಚೆ ನಡೆಯಿತು. ಚುನಾವಣಾ ಆಯೋಗ ZP, TP ವಾರ್ಡುವಾರು ಮೀಸಲಾತಿ ಪಟ್ಟಿಗೆ ಒಪ್ಪಿಗೆ ಸೂಚಿಸಿದರೆ ಜನವರಿ ಮೊದಲ ವಾರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸಲು ಸರ್ಕಾರ ಮುಂದಾಗಿದೆ.
ಎರಡು ದಿನಗಳ ಹಿಂದೆ ರಾಜ್ಯ ಚುನಾವಣಾ ಆಯೋಗಕ್ಕೆ ಸರ್ಕಾರ ZP, TP ವಾರ್ಡುವಾರು ಮೀಸಲಾತಿ ಪಟ್ಟಿಗೆ ಒಪ್ಪಿಗೆ ಕೋರಿ ಮನವಿ ಸಲ್ಲಿಸಿತ್ತು. ರಾಜ್ಯದಲ್ಲಿ ಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ರಾಜ್ಯ ಚುನಾವಣಾ ಆಯೋಗ ಮೀಸಲಾತಿ ಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಿದೆ. ಚುನಾವಣಾ ಆಯೋಗ ಮೀಸಲಾತಿ ಪಟ್ಟಿಗೆ ಒಪ್ಪಿಗೆ ಸೂಚಿಸಿದ ಬಳಿಕ ಆ ಸಂಬಂಧ ಕರಡು ಅಧಿಸೂಚನೆ ಹೊರಡಿಸಲಾಗುವುದು.
ಸಾರ್ವಜನಿಕ ಆಕ್ಷೇಪ ಪರಿಗಣಿಸಿದ ಬಳಿಕ ಡಿಸೆಂಬರ್ ಮಧ್ಯದಲ್ಲಿ ವಾರ್ಡುವಾರು ಮೀಸಲಾತಿ ಪಟ್ಟಿಯ ಅಂತಿಮ ಅಧಿಸೂಚನೆ ಪ್ರಕಟಿಸುತ್ತೇವೆ. ಜನವರಿ ಮೊದಲ ವಾರದಲ್ಲಿ ZP, TP ಚುನಾವಣೆ ನಡೆಸಲು ಮುಂದಾಗಿದ್ದೇವೆ. ZP, TP ಚುನಾವಣೆಯ 15 ದಿನಗಳ ಬಳಿಕ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
