ಅಪರಾಧ ರಾಜಕೀಯ ಸುದ್ದಿ

KPSC ಹಗರಣ : ಮಾಜಿ ಅಧ್ಯಕ್ಷ ಶವಶಂಕರಪ್ಪ, ಸದಸ್ಯೆ ಗೀತಾ ಬಂಧನ: 14ದಿನ ಇಡಿ ಕಸ್ಟಡಿಗೆ ನೀಡಿ ಆದೇಶ

Share It

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ನಡೆದಿರುವ ಪಶುವೈದ್ಯಾಧಿಕಾರಿಗಳ ನೇಮಕ ಹಗರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಹೇಳಿಕೆಯ ಆಧಾರದಲ್ಲಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಹಾಗೂ ಸದಸ್ಯೆ ಗೀತಾ ಅವರನ್ನು ಇಡಿ ಅಧಿಕಾರಿಗಳು ರಾತ್ರೋರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮನೆಯಲ್ಲಿ ಹಾಜರುಪಡಿಸಿದ್ದು, ನ್ಯಾಯಾಧೀಶ ಮಂಜುನಾಥ್ ಅವರು, ಆರೋಪಿಗಳನ್ನು 14 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.

ಆರೋಪಿಗಳಾದ ಜ್ಞಾನೇಶ್ ಕುಮಾರ್ ಮತ್ತು ಬಸವರಾಜು ಕನ್ನಾಳೆ ಹೇಳಿಕೆಯನ್ನು ಆಧರಿಸಿ, ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ ಅವರನ್ನು ಮನೆಯಲ್ಲಿಯೇ ತಡರಾತ್ರಿವರೆಗೆ ವಿಚಾರಣೆ ನಡೆಸಲಾಯಿತು. ಅನಂತರ ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.

ನ್ಯಾಯಾಧೀಶರು ಇಂದು ಮಧ್ಯಾಹ್ನ 3 ಗಂಟೆಗೆ ನಗರದ 4ನೇ ಸಿಸಿಎಚ್ ನ್ಯಾಯಾಲಯದಲ್ಲಿ ಹಾಜರುಪಡಿಸಲು ಸೂಚನೆ ನೀಡಿದ್ದು, ಮುಂದಿನ ಪ್ರಕ್ರಿಯೆ ಪೂರ್ಣಗೊಳಿಸಲು ತಿಳಿಸಿದ್ದಾರೆ.


Share It

You cannot copy content of this page