ಉಪಯುಕ್ತ ಸುದ್ದಿ

ಸರ್ಕಾರಿ, ಅರಣ್ಯ ಜಾಗದ ಆಸ್ತಿಯನ್ನು ತೆರಿಗೆಯಿಂದ ಕೈಬಿಡುವ ಸುತ್ತೋಲೆಗೆ ತಡೆ: ಖಂಡ್ರೆ

Share It

ಚಿಕ್ಕಮಗಳೂರು : ತೆರಿಗೆ ನಿರ್ಧರಣೆ ಹಾಗೂ ಇ-ಸ್ವತ್ತು 2.0 ತಂತ್ರಾಂಶದಿಂದ ಸರ್ಕಾರಿ ಮತ್ತು ಅರಣ್ಯ ಭೂಮಿಯಲ್ಲಿನ ಆಸ್ತಿಗಳನ್ನು ಕೈಬಿಡುವ ಬಗ್ಗೆ ಕಳೆದ ಆಗಸ್ಟ್ 13ರಂದು ಹೊರಡಿಸಲಾಗಿರುವ ಸುತ್ತೋಲೆಗೆ ತಾತ್ಕಾಲಿಕ ತಡೆ ನೀಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಉಭಯ ಸದನಗಳಲ್ಲಿ ಅನುಮೋದನೆಯಾಗಿ, ರಾಜ್ಯಪಾಲರ ಅಂಗೀಕಾರ ಪಡೆದ ಕಾಯಿದೆಗೆ ಸಂಬಂಧಿಸಿದಂತೆ ಈ ಸುತ್ತೋಲೆ ಹೊರಡಿಸಲಾಗಿತ್ತು. ಆದಾಗ್ಯೂ ಮುಖ್ಯಮಂತ್ರಿಗಳು ಸದನದಲ್ಲಿ ಭರವಸೆ ನೀಡಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಯ ಜಂಟಿ ಸರ್ವೆ ಪೂರ್ಣಗೊಳ್ಳುವ ತನಕ ಈ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಹೀಗಾಗಿ ಕಂದಾಯ, ಅರಣ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿದಂತೆ ಬಹು ಇಲಾಖೆಯ ಅಧಿಕಾರಿಗಳ ಉನ್ನತಮಟ್ಟದ ಸಮಿತಿ ರಚಿಸಿ ಇದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.


Share It

You cannot copy content of this page