ರಾಯಚೂರು: ತನ್ನ ಹೊಸದಲ್ಲಿ ಗಿಡ ನೆಡಲು ವಿರೋಧಿಸಿದ ಎಂಬ ಕಾರಣಕ್ಕೆ ರೈತನೊಬ್ಬನ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಯರದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಯರದೊಡ್ಡಿ ಗ್ರಾಮದ ತನ್ನ ಹೊಲದಲ್ಲಿ ರೈತ ರಮೇಶ್ ಕೆಲಸ ಮಾಡುತ್ತಿದ್ದ, ಈ ವೇಳೆ ಸಸಿ ನೆಡಲು ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿದ್ದರು. ಇದಕ್ಕೆ ಆಕ್ಷೇಪ ಪಡೆಸಿದ ಹಿನ್ನೆಲೆಯಲ್ಲಿ ರಮೇಶ್ ನನ್ನು ಬೈಕ್‌ನಲ್ಲಿ ಕರೆದುಕೊಂಡು ಹೋದ ಅರಣ್ಯ ಇಲಾಖೆ ಸಿಬ್ಬಂದಿ ಭೀಕರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ರಮೇಶ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗಿದೆ. ಈ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುವುದಾಗಿ ಡಿಎಫ್‌ಒ ಸುರೇಶ್ ಬಾಬು ತಿಳಿಸಿದ್ದಾರೆ.
