ನವದೆಹಲಿ: ದೆಹಲಿಯಲ್ಲಿ ನಡೆಯಬೇಕಿದ್ದ ಕಾಕ್ರೋಚ್ ಪ್ರತಿಭಟನೆಯನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಎಲ್ಲ ಸಾಹಸಗಳನ್ನು ನಡೆಸುತ್ತಿದೆ. ಪ್ರತಿಭಟನೆ ನೇತೃತ್ವ ವಹಿಸಿದ್ದ ಪ್ರಮುಖ ನಾಯಕರನ್ನು ವಶಕ್ಕೆ ಪಡೆಯುವ ಮೂಲಕ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ನಡೆಸಿದೆ.
ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಯನ್ನು ವಿಮಾನ ಇಳಿಯುವ ಮೊದಲೇ ಬಂಧಿಸಿದ್ದು, ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ವೇಳೆಯಲ್ಲಿಯೇ ಬಂಧಿಸಲಾಗಿದೆ. ವಿಮಾನದೊಳಗೆ ಆಗಮಿಸಿದ ಸುಮಾರು 50ಕ್ಕೂ ಹೆಚ್ಚು ಪೊಲೀಸರು ದೀಪ್ಕೆ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮತ್ತೊಬ್ಬ ಹೋರಾಟಗಾರ ಧ್ರುವ್ ರಾಥಿ ಅವರನ್ನು ಗುರುಗ್ರಾಮ್ ನಲ್ಲಿರುವ ಅವರ ಮನೆಯಲ್ಲಿ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮನೆಯ ಸುತ್ತಲೂ ಸುತ್ತುವರಿದ ಸುಮಾರು 50ಕ್ಕೂ ಹೆಚ್ಚು ಪೊಲೀಸರು ರಾಥಿ ಅವರನ್ನು ಬಂಧಿಸಿದ್ದಾರೆ. ಜಂತರ್ ಮಂತರ್ಗೆ ತೆರಳಲು ಸಿದ್ಧರಾಗುತ್ತಿದ್ದಂತೆ ಪ್ರಮುಖ ನಾಯಕರನ್ನು ಬಂಧಿಸಲಾಗಿದೆ.
