ಬೆಂಗಳೂರು: ಖ್ಯಾತ ವಿಮರ್ಶಕ, ಭಾಷಾತಜ್ಞರೂ ಆಗಿದ್ದ ಕೆ.ವಿ.ನಾರಾಯಣ ಅವರು ಇಂದು ನಿಧನರಾಗಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಕೆವಿಎನ್ ಕುವೆಂಪು ಭಾಷಾ ಭಾರತಿ ಮಾಜಿ ಅಧ್ಯಕ್ಷರಾಗಿದ್ದರು.
ಡಾ. ಕೆ ವಿ ನಾರಾಯಣ್ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ: ಕನ್ನಡದ ಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ, ವಿಮರ್ಶಕ ಹಾಗೂ ಸಂಸ್ಕೃತಿ ಚಿಂತಕ ಡಾ. ಕೆ ವಿ ನಾರಾಯಣ್ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಡಾ. ಕೆ ವಿ ಎನ್ ಅವರು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಉತ್ತಮ ಕೆಲಸ ಮಾಡಿದ್ದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರವೂ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದ ಅವರ ನಿಧನ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ದೊಡ್ಡ ನಷ್ಟ ಎಂದು ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
