ಸುದ್ದಿ

ನಂದಿನಿ ಲೇಔಟ್‌ನಲ್ಲಿ 5ನೇ ವರ್ಷದ ಕನ್ನಡ ರಾಜ್ಯೋತ್ಸವ: ಶಾಸಕ ಕೆ. ಗೋಪಾಲಯ್ಯ ಅವರಿಂದ ಅನ್ನದಾನ ಕಾರ್ಯಕ್ರಮಕ್ಕೆ ಚಾಲನೆ

Share It


ಬೆಂಗಳೂರು: ನಂದಿನಿ ಲೇಔಟ್ ಫುಡ್ ಸ್ಟ್ರೀಟ್ ಟ್ರೇಡರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಗೋಪಾಲಯ್ಯ ಅವರು ಧ್ವಜಾರೋಹಣ ನೆರವೇರಿಸಿ, ಅನ್ನದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
​ನಂದಿನಿ ಲೇಔಟ್‌ನ 4ನೇ ಬ್ಲಾಕ್‌ನ 11ನೇ ಕ್ರಾಸ್‌ನಲ್ಲಿ ನಡೆದ ಈ ಸಮಾರಂಭದಲ್ಲಿ ಮಾತನಾಡಿದ ಶಾಸಕ ಕೆ. ಗೋಪಾಲಯ್ಯ ಅವರು, ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಪ್ರತಿ ವರ್ಷದಂತೆ ಈ ಬಾರಿಯೂ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವುದು ಶ್ಲಾಘನೀಯವಾಗಿದ್ದು, ನಾಡಿನ ಜನತೆಗೆ, ಕುಟುಂಬಗಳಿಗೆ ಹಾಗೂ ಸಂಘಕ್ಕೆ ಒಳಿತಾಗಲಿ ಎಂದು ಹಾರೈಸಿದರು.
​ಈ ಸಂದರ್ಭದಲ್ಲಿ ಮಾಜಿ ಬಿಬಿಎಂಪಿ ಸದಸ್ಯ ರಾಜೇಂದ್ರಕುಮಾರ್, ರಾಘವೇಂದ್ರ ಶೆಟ್ಟಿ, ಭಾಸ್ಕರ್, ಆನಂದ್, ಲೋಕೇಶ್, ಸಂಘದ ಅಧ್ಯಕ್ಷ ಸತೀಶ್, ವಿನೋದ್, ನಾಗರಾಜು, ಚಂದ್ರು ಸೇರಿದಂತೆ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.


Share It

You cannot copy content of this page