ಸುದ್ದಿ

ಆಸ್ತಿ ವಿವಾದ : ಜೋಡಿ ಕೊಲೆ

Share It

ಆಸ್ತಿ ವಿವಾದ : ಜೋಡಿ ಕೊಲೆ

ಬೆಳಗಾವಿ: ಆಸ್ತಿ ವಿಚಾರವಾಗಿ ಉಂಟಾದ ವಿವಾದ ವಿಕೋಪಕ್ಕೆ ತಿರುಗಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಯರಗಟ್ಟಿ ತಾಲೂಕಿನ ಜೀವಾಪುರ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದವರನ್ನು ರಮೇಶ ಹನುಮಂತ ನಾಯ್ಕರ (29), ಬಸವ್ವ ಭೀಮಪ್ಪ ನಾಯ್ಕರ (60) ಎಂದು ಗುರುತಿಸಲಾಗಿದೆ.
ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.

ಆಸ್ತಿ ವಿಚಾರವಾಗಿ ಕುಟುಂಬದವರ ನಡುವೆ ನಡೆಯುತ್ತಿದ್ದ ಕಲಹ ಈ ಜೋಡಿ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ವಿವಾದ ತೀವ್ರಗೊಂಡ ಪರಿಣಾಮ ಇಬ್ಬರು ಹತ್ಯೆಯಾಗಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಮಡಿವಾಳರ ಅವರು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಒಂದೇ ಗ್ರಾಮದಲ್ಲಿ ಇಬ್ಬರು ಹತ್ಯೆಯಾಗಿರುವ ಘಟನೆ ಜೀವಾಪುರ ಗ್ರಾಮಸ್ಥರಲ್ಲಿ ತೀವ್ರ ಆಘಾತ ಮೂಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Share It

You cannot copy content of this page