ಬೆಂಗಳೂರು: ದೇಶದ ಕಾನೂನಿನ ಇತಿಹಾಸದಲ್ಲೇ ಶ್ರವಣ ದೋಷವುಳ್ಳ ವಕೀಲರಿಗೆ ವಾದ ಮಂಡನೆಗೆ ಅವಕಾಶ ಮಾಡಿಕೊಡುವ ಮೂಲಕ ಕನರ್ಾಟಕ ಹೈಕೋಟರ್್ ದೇಶದಲ್ಲೇ ಪ್ರಥಮ ಎಂಬ ಹೆಗ್ಗಳಿಕೆಯನ್ನು ಪಡೆಯಿತು.
ಸ್ಕಾಟ್ಲೆಂಡ್ನಲ್ಲಿರುವ ಪತಿ ಮತ್ತು ಬೆಂಗಳೂರಿನಲ್ಲಿರುವ ಪತ್ನಿಯ ನಡುವಿನ ಕೌಟುಂಬಿಕ ವ್ಯಾಜ್ಯದ ಭಾಗವಾಗಿ ಪತಿಗೆ ಲುಕ್ಔಟ್ ನೋಟಿಸ್ ಜಾರಿಗೊಳಿಸಲಾಗಿದೆ. ಇದನ್ನು ರದ್ದುಗೊಳಿಸಬೇಕು ಎಂದು ಕೋರಿ ಪತಿ ಹೈಕೋಟರ್್ ಮೆಟ್ಟಿಲೇರಿದ್ದಾರೆ. ಈ ಕುರಿತಾದ ಪ್ರಕರಣದಲ್ಲಿ ಪತ್ನಿಯ ಪರವಾಗಿ ಸಾರಾ ಸನ್ನಿ ಎಂಬ ಶ್ರವಣ ದೋಷವುಳ್ಳ ವಕೀಲರು ವಾದ ಮಂಡಿಸಿದರು.
ಕೌಟುಂಬಿಕ ಪ್ರಕರಣವೊಂದರಲ್ಲಿ ಪತಿಗೆ ಲುಕ್ಔಟ್ ನೋಟಿಸ್ ಜಾರಿ ಮಾಡಿದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅಜರ್ಿ ವಿಚಾರಣೆ ನಡೆಸಿದ ನ್ಯಾಯಮೂತರ್ಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಶ್ರವಣ ದೋಷವುಳ್ಳ ವಕೀಲೆ ಸಾರಾ ಸನ್ನಿ ಅವರಿಂದ ವಾದ ಆಲಿಸಿತು. ಅಲ್ಲದೆ, ನ್ಯೂನತೆಯನ್ನು ಮೀರಿ ದುಭಾಷಿ ನೆರವಿನಿಂದ ವಾದಿಸಿದ ಸಾರಾ ಪ್ರಯತ್ನಕ್ಕೆ ಮೆಚ್ಚುಗೆ ಸೂಚಿಸಿತು. ದುಭಾಷಿಗೆ ಸಂಜ್ಞೆಗೆ ಹೊಂದಿಕೊಳ್ಳಲು ಕಾಲಾವಕಾಶದ ಅಗತ್ಯ ಎಂದು ಪೀಠ ತಿಳಿಸಿತು.
ವಿಚಾರಣೆ ಪೂರ್ಣಗೊಂಡ ಬಳಿಕ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್, ಈ ಹಿಂದೆ ಸುಪ್ರೀಂ ಕೋಟರ್್ ಮುಖ್ಯನ್ಯಾಯಮೂತರ್ಿ ಪೀಠದ ಮುಂದೆ ಸಾರಾ ವಾದ ಮಂಡಿಸಿದ್ದರು. ಕನರ್ಾಟಕ ಹೈಕೋಟರ್್ ಸಾರಾಗೆ ವಾದಿಸಲು ಅವಕಾಶ ಕಲ್ಪಿಸಿಕೊಡುವ ಮೂಲಕ ಶ್ರವಣ ದೋಷವುಳ್ಳ ವಕೀಲರಿಗೆ ವಾದಿಸಲು ಅವಕಾಶ ಕಲ್ಪಿಸಿದ ದೇಶದ ಮೊದಲ ಹೈಕೋಟರ್್ ಎಂಬ ಕೀತರ್ಿಗೆ ಪಾತ್ರವಾಗಿದೆ ಎಂದು ತಿಳಿಸಿದರು. ನ್ಯಾಯಮೂತರ್ಿ ನ್ಯಾ.ನಾಗಪ್ರಸನ್ನ ಅವರು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 19ಕ್ಕೆ ಮುಂದೂಡಿದರು.