ಅಪರಾಧ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಆತ್ಮಹತ್ಯೆ ಕೇಸ್: ಇಬ್ಬರು ಅಧಿಕಾರಿಗಳು ಸಸ್ಪೆಂಡ್

Share It

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್‌(52) ಅವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್​ನಲ್ಲಿರುವ ಮನೆಯಲ್ಲಿ ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣಾಗಿದ್ದರು. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದರಿಂದ ಎಚ್ಚೆತ್ತ ರಾಜ್ಯಸರ್ಕಾರ, ಡೆತ್​ನೋಟ್​ನಲ್ಲಿ ನಮೂದಿಸಿದ್ದ 3 ಜನ ಅಧಿಕಾರಿಗಳಲ್ಲಿ ಇಬ್ಬರಾದ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ.

ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ-ಸಚಿವ ನಾಗೇಂದ್ರ: ಈ ವೇಳೆ ಮಾತನಾಡಿದ ಸಚಿವ ನಾಗೇಂದ್ರ, ‘ ಈ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರದ ಹಣ ನಾವು ದುರುಪಯೋಗ ವಾಗಲು ಬಿಡುವುದಿಲ್ಲ. 88 ಕೋಟಿ ರೂ. ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಾಸ್ ಪಡೆಯುತ್ತಿದ್ದಾರೆ. ಜೊತೆಗೆ ಈ ಪ್ರಕರಣವನ್ನ ರಾಜ್ಯ ಸರ್ಕಾರ ಮೊನ್ನೆಯೇ ಸಿಐಡಿಗೆ ವಹಿಸಿದ್ದು, ಸೂಕ್ಷ್ಮವಾಗಿ ತನಿಖೆ ಮಾಡುತ್ತಿದೆ ಎಂದರು.

ಶಿವಮೊಗ್ಗ ಮತ್ತು ಬೆಂಗಳೂರು CID ಅಧಿಕಾರಿಗಳಿಂದ ತನಿಖೆ: ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ಬೆಂಗಳೂರು ಎರಡು CID ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸರ್ಕಾರದ ಪೂರ್ವಾನುಮತಿ ಪಡೆದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಎಂ.ಡಿ , ಸಿಇಓ ಹಾಗೂ ಎಲ್ಲಾ ನಿರ್ದೇಶಕರು ಸೇರಿದಂತೆ 6 ಜನ ಬ್ಯಾಂಕ್ ಅಧಿಕಾರಿಗಳ ವಿರುದ್ಧ FIR ದಾಖಲಿಸಿದ್ದಾರೆ. ಎಫ್.ಎಸ್.ಎಲ್ ಮತ್ತು ಸಿ.ಐ.ಡಿ ವರದಿ ಬಂದ ತಕ್ಷಣವೇ ಕಾನೂನು ರೀತಿಯಲ್ಲಿ ಎಲ್ಲರಿಗೂ ಕಠಿಣ ಶಿಕ್ಷೆ ಆಗಲಿದೆ ಎಂದು ಸಚಿವ ನಾಗೇಂದ್ರ ಸ್ಪಷ್ಟಪಡಿಸಿದರು.

ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ ಅಮಾನತು ಬೆನ್ನಲ್ಲೇ ರಾಜ್ಯಸರ್ಕಾರ ಡಾ. ಕೆ.ಆರ್.ರಾಜ್ ಕುಮಾರ್ ಅವರನ್ನ ಪ್ರಭಾರಿ ಎಂಡಿ ಆಗಿ ನೇಮಿಸಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾಗಿದ್ದ ರಾಜ್ ಕುಮಾರ್, ಈಗ ವ್ಯವಸ್ಥಾಪಕ ನಿರ್ದೇಶಕರ ಸ್ಥಾನಕ್ಕೆ ಹೆಚ್ಚುವರಿ ಪ್ರಭಾರಿಯಾಗಿ ನೇಮಕಗೊಂಡಿದ್ದಾರೆ.


Share It

You cannot copy content of this page