ಬೆಂಗಳೂರು: ಪ್ರಜ್ವಲ್ ರೇವಣ್ಣರನ್ನ ಅರೆಸ್ಟ್ ಮಾಡಲು ಎಸ್‌ಐಟಿ ತುದಿಗಾಲಲ್ಲಿ ನಿಂತಿರುವ ಹೊತ್ತಿನಲ್ಲೆ ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಕುಟುಂಬ ಸಮೇತರಾಗಿ ರೆಸಾರ್ಟ್ವೊಂದರಲ್ಲಿ ಜಾಲಿ ಮೂಡ್‌ನಲ್ಲಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ, ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ರೇವತಿ ಹಾಗೂ ಮೊಮ್ಮಗ ಅವ್ಯಾನ್ ದೇವ್ ಅವರೊಂದಿಗೆ ಖಾಸಗಿ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ರೆಸಾರ್ಟ್ನ ವಾಟರ್ ಬೋಟ್‌ನಲ್ಲಿ ಪ್ರಯಾಣ ಮಾಡಿದ ಕುಮಾರಸ್ವಾಮಿ ಕುಟುಂಬ ತಮ್ಮ ಮೊಮ್ಮಗನನ್ನು ಆಟವಾಡಿಸುತ್ತಾ ಕಾಲ ಕಳೆಯಿತು. ಆತನಿಗೆ ಸಫಾರಿಯಲ್ಲಿ ಕೆಲವು ಪ್ರಾಣಿಗಳನ್ನು ತೋರಿಸಿ, ಕುಟುಂಬ ಎಂಜಾಯ್ ಮಾಡಿತು.
ಮಾಜಿ ಸಿಎಂ ಕುಮಾರಸ್ವಾಮಿ, ರೆಸಾರ್ಟ್ನಲ್ಲಿ ಕೆಲಸ ಮಾಡುವ ಮಹಿಳೆಯರ ಯೋಗಕ್ಷೇಮ ವಿಚಾರಿಸಿದರು. ನಿಖಿಲ್ ಅವರನ್ನು ಕಂಡು ಕೆಲವು ಮಹಿಳೆಯರು ಸೆಲ್ಫಿ ತೆಗೆದುಕೊಂಡರು. ರೆಸಾರ್ಟ್ನ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದ್ದರು ಕುಮಾರಸ್ವಾಮಿ ಅವರ ಕುಟುಂಬವನ್ನು ಕಂಡು ಸಂತಸಪಟ್ಟರು.
ಇತ್ತ ಪ್ರಜ್ವಲ್ ರೇವಣ್ಣ ಸೇರಿದಂತೆ ಮಾಜಿ ಮಂತ್ರಿ ರೇವಣ್ಣ ಮತ್ತು ಅವರ ಪತ್ನಿ ಭವಾನಿ ರೇವಣ್ಣ, ಮೂವರು ಕೂಡ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಜ್ವಲ್ ರೇವಣ್ಣ ಇಂದು ರಾತ್ರಿ ದೇಶಕ್ಕೆ ವಾಪಸ್ಸಾಗಲಿದ್ದು, ಅವರನ್ನು ಬಂಧನ ಮಾಡಲು ಎಸ್‌ಐಟಿ ವಿಮಾನ ನಿಲ್ದಾಣದಲ್ಲಿ ಕಾದು ಕುಳಿತಿದೆ.