ಅಪರಾಧ ಸುದ್ದಿ

ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಧಾರುಣ ಸಾವು

Share It

ಹಾಸನ : ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಧಾರುಣ ರೀತಿಯಲ್ಲಿ ಸಾವಿಗೀಡಾದ ಘಟ‌ನೆ ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ.

ದೀಕ್ಷಿತ್ (10), ನಿತ್ಯಶ್ರೀ (12) ಕುಸುಮ (6) ಮೃತ ದುರ್ದೈವಿಗಳು. ಜಾನುವಾರುಗಳನ್ನು ಕೆರೆಯ ಬಳಿ ಕಟ್ಟಿ ಆಟವಾಡುತ್ತಿದ್ದ ಮೂರು ಮಕ್ಕಳಲ್ಲಿ ಒಬ್ಬ ಬಾಲಕಿ ಆಕಸ್ಮಿಕವಾಗಿ ಮುಳುಗಿದ್ದು, ಆಕೆಯನ್ನು ರಕ್ಷಿಸುವ ಪ್ರಯತ್ನದಲ್ಲಿ ಮಿಕ್ಕಿಬ್ಬರೂ ಮುಳುಗಿದ್ದಾರೆ.

ಸ್ಥಳೀಯರು ಶವಗಳನ್ನು ಹೊರಕ್ಕೆ ತೆಗೆದಿದ್ದಾರೆ. ಸ್ಥಳಕ್ಕೆ ಹಳೇಬೀಡು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Share It

You cannot copy content of this page