ಬಿಜೆಪಿ ವಿರುದ್ಧದ ಅಪಪ್ರಚಾರ ಪ್ರಕರಣ
ಬೆಂಗಳೂರು: ಬಿಜೆಪಿ ವಿರುದ್ಧ ಮಾಡಿದ್ದ ಭಾಷಣಕ್ಕೆ ಸಂಬಂಧಿಸಿದ್ದ ಮಾನನಷ್ಟ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ.
ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಬಿಜೆಪಿಯ ವಿರುದ್ಧ ಮುಖ್ಯಮಂತ್ರಿ ಹುದ್ದೆ ಮತ್ತು ಮಂತ್ರಿಗಳ ಹುದ್ದೆಯನ್ನು ಮಾರಾಟ ಮಾಡಲಾಗಿದೆ ಎಂದು ಟೀಕಿಸಿತ್ತು. ಸಿಎಂ ಹುದ್ದೆಗೆ 2500 ಕೋಟಿ ಮಂತ್ರಿಗಳ ಹುದ್ದೆಗೆ 500 ಕೋಟಿ ಕೊಟ್ಟು ಖರೀದಿಸಿದ್ದಾರೆ ಎಂಬ ಹೇಳಿಕೆ ನೀಡಿದ್ದು, ಇದರಿಂದ ಬಿಜೆಪಿಗೆ ಅವಮಾನವಾಗಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೇಶವ್ ಪ್ರಸಾದ್ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಆರೋಪಿಯನ್ನಾಗಿಸಲಾಗಿದೆ. ಹೀಗಾಗಿ, ಈ ಮೂವರು ವಿಚಾರಣೆಗೆ ಹಾಜರಾಗುವಂತೆ 42 ನೇ ವಿಶೇಷ ನ್ಯಾಯಾಲಯ ನೊಟೀಸ್ ನೀಡಿದೆ ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 10.45 ಕ್ಕೆ ನ್ಯಾಯಾಲಯದ ಮುಂದೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹಾಜರಾಗುತ್ತಿದ್ದಾರೆ.
