ರಾಜಕೀಯ ಸುದ್ದಿ

ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲಿದೆ

Share It

ಬೆಂಗಳೂರು: “ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರ ನಿವಾಸದ ಬಳಿ ಶನಿವಾರ ರಾತ್ರಿ ಮಾಧ್ಯಮಗಳು, ಎಕ್ಸಿಟ್ ಪೋಲ್ ಸಮೀಕ್ಷೆಗಳ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಉತ್ತರಿಸಿದ್ದು ಹೀಗೆ: “ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ.

ರಾಜ್ಯದಲ್ಲಿ ಕಾಂಗ್ರೆಸ್ 3-4 ಸ್ಥಾನ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಮಾಹಿತಿ ತೋರಿಸುತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ.”


Share It

You cannot copy content of this page