ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ
ಹುಬ್ಬಳ್ಳಿ: ಕಾಂಗ್ರೆಸ್ಸಿಗರಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ. ಹಾಗಾಗಿ ಜನರೂ ಕಾಂಗ್ರೆಸ್ ಮೇಲೆ ವಿಶ್ವಾಸವ ಇಟ್ಟಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದವರಿಗೆ ದೇಶದ ನ್ಯಾಯಾಂಗ ವ್ಯವಸ್ಥೆ ಮೇಲೂ ನಂಬಿಕೆ ಇಲ್ಲದಾಗಿದೆ ಎಂದು ಹೇಳಿದರು.
ಸುಪ್ರೀಂ ಕೋರ್ಟ್, ಸಿಜೆ, ಸಿಬಿಐ, ಚುನಾವಣಾ ಆಯೋಗ ಹೀಗೆ ಸಂವಿಧಾನ ಮತ್ತು ಕಾನೂನು ಆಧಾರಿತವಾಗಿ ರಚಿತವಾದ ಯಾವುದೇ ಸಂಸ್ಥೆಗಳ ಮೇಲೂ ನಂಬಿಕೆ ಇಲ್ಲದಂತೆ ವರ್ತಿಸುತ್ತಾರೆ ಕಾಂಗ್ರೆಸ್ಸಿಗರು ಎಂದು ಆರೋಪಿಸಿದರು.
ಮುಖ್ಯವಾಗಿ ಜನತಾ ಜನರ್ಧನರ ಮೇಲೂ ಇವರಿಗೆ ವಿಶ್ವಾಸವಿಲ್ಲ. ಹೀಗಾಗಿ ಜನತಾ ಜನರ್ಧನ ಸಹ ಕಾಂಗ್ರೆಸ್ಸಿಗರ ಮೇಲೆ ನಂಬಿಕೆ ಇಟ್ಟಿಲ್ಲ ಎಂದು ಜೋಶಿ ಹೇಳಿದರು.

