ಉಪಯುಕ್ತ ಸುದ್ದಿ

ತುಂಗಾ ಡ್ಯಾಂ ತುಂಬಲು ನಾಲ್ಕು ಅಡಿ ಬಾಕಿ: ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುಗಡೆ

Share It

ಶಿವಮೊಗ್ಗ : ತುಂಗಾ ಮೇಲ್ದಂಡೆ ಯೋಜನೆ ಡ್ಯಾಂ ಪೂರ್ಣ ಮಟ್ಟಕ್ಕೆ ತುಂಬಲು 4 ಅಡಿ ಬಾಕಿಯಿದ್ದು, ಮುಂದೆ ಮುಂಗಾರು ಪ್ರಾರಂಭವಾಗಿ ಜಲಾನಯನ ಪ್ರದೇಶದಲ್ಲಿ ಮಳೆಯಾದರೆ ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ನದಿಗೆ ನೀರನ್ನು ಬಿಡುವ ಸಂಭವವಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿಲಾಗಿದೆ.

ಅಲ್ಲದೆ ಈ ಹಿನ್ನೆಲೆಯಲ್ಲಿ ಡ್ಯಾಂ ಕೆಳಭಾಗ ನದಿ ಪಾತ್ರದಲ್ಲಿ ಬರುವ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡಬಾರದು ಹಾಗೂ ದನ ಕರುಗಳನ್ನು, ಪ್ರಾಣಿಗಳನ್ನು ಮೇಯಲು ಬಿಡುವುದು ಮಾಡಬಾರದೆಂದು ಹಾಗೂ ತುಂಬಾ ನದಿಯ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ ಗ್ರಾಮಸ್ಥರಿಗೆ ನದಿ ಪಾತ್ರದಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡದೇ ಸುರಕ್ಷಿತ ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆಯಿಂದಿರಲು ತುಂ.ಮೇ.ಯೋ. ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share It

You cannot copy content of this page