ಲಕ್ನೋ : ಒಂದು ಕಾಲದಲ್ಲಿ ಉತ್ತರ ಪ್ರದೇಶದ ಪ್ರಬಲ ಪಕ್ಷವಾಗಿದ್ದ ಬಹುಜನ ಸಮಾಜವಾದಿ ಪಕ್ಷ ಈ ಸಲದ ಲೋಕಸಭಾ ಚುನಾವಣೆಯಲ್ಲಿ ಹೇಳ ಹೆಸರಿಲ್ಲದಂತಾಗಿದೆ.
ಎಷ್ಟೆಂದರೆ, ಯುಪಿಯಲ್ಲಿ ಸ್ಪರ್ಧೆ ಮಾಡಿದ್ದ 79 ಕ್ಷೇತ್ರಗಳಲ್ಲಿಯೂ ಮಕಾಡೆ ಮಲಗಿದೆ. ದೇಶಾದ್ಯಂತ 424 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೂ ಒಂದರಲ್ಲೂ ಮುನ್ನಡೆ ಸಾಧಿಸಿಲ್ಲ.
ಉತ್ತರ ಪ್ರದೇಶದಲ್ಲಿ ಬಿಜೆಪಿ 33, ಸಮಾಜವಾದಿ ಪಕ್ಷ 37, ಕಾಂಗ್ರೆಸ್ 6 , ಆರ್ಎಲ್ಡಿ 2 ಹಾಗೂ ಇತರರು 2 ಕ್ಷೇತ್ರಗಳಲ್ಲಿ ಗೆಲುವು ದಕ್ಕಿಸಿಕೊಂಡಿವೆ. ಒಂದೂ ಸ್ಥಾನವನ್ನು ಗೆಲ್ಲದ ಕಾರಣ ಬಿಎಸ್ಪಿ ಯುಗ ಅಂತ್ಯವಾಯಿತು ಎನ್ನಲಾಗುತ್ತಿದೆ.
ಖುಷಿಯ ವಿಚಾರವೆಂದರೆ ಆ ಸ್ಥಾನಕ್ಕೆ ಮತ್ತೊಬ್ಬ ದಲಿತ ನಾಯಕ ಆಗಮಿಸಿದ್ದಾರೆ. ಯಾವುದೇ ಪಕ್ಷದ ಬೆಂಬಲ ಪಡೆಯದೇ ಸ್ವತಂತ್ರವಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಯುಪಿಯಲ್ಲಿ ಮಾಯಾವತಿ ಯುಗಾಂತ್ಯವಾಗಿದೆಯೆಂದು ವಿಶ್ಲೇಷಿಸಲಾಗಿದೆ.
