ಅಪರಾಧ ಸುದ್ದಿ

ಗ್ರಾಹಕ ಬಿಟ್ಟು ಹೋದ 7 ಲಕ್ಷ ರೂ ಮನೆಗೊಯ್ದ ಹೊಟೆಲ್ ಸರ್ವರ್ ಬಂಧನ

Share It

ಶಿವಮೊಗ್ಗ : ನಗರದ ಬ್ರೈಟ್ ಹೊಟೆಲಿನ ಗ್ರಾಹಕ ಬಿಟ್ಟು ಹೋದ 7 ಲಕ್ಷ ರೂ. ಇದ್ದ ಹಣದ ಚೀಲವನ್ನು ಸರ್ವರ್ ಎತ್ತಿಕೊಂಡು ಹೋದ ಘಟನೆ ಸಂಭವಿಸಿದ್ದು, ಆತನನ್ನು ಬಂಧಿಸಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಾಗರ ತಾಲೂಕು ಜಂಬಾನಿ ಗ್ರಾಮದ ಲೋಕೇಶ್, ಸ್ನೇಹಿತನೊಂದಿಗೆ ಹೋಟೇಲ್ ನಲ್ಲಿ ಊಟ ಮಾಡುತ್ತಿದ್ದಾಗ 7 ಲಕ್ಷ ರೂ. ಇದ್ದ ಚೀಲವನ್ನು ಟೇಬಲ್ ಮೇಲೆ ಇಟ್ಟಿದ್ದರು. ಅವರಸರಲ್ಲಿ ಚೀಲ ಅಲ್ಲಿಯೇ ಬಿಟ್ಟು ಹೋಗಿದ್ದರು. ಸ್ವಲ್ಪ ಸಮಯದ ನಂತರ ಕಾರಿನಲ್ಲಿ ಬ್ಯಾಗ್ ಇಲ್ಲದೇ ಇರುವುದು ಕಂಡುಬಂದಿದ್ದು, ವಾಪಾಸ್ ಹೋಟೇಲ್ ಗೆ ಬಂದು ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದಾಗ ಹೋಟೇಲ್ ನ ಸರ್ವರ್ ಹೇಮಂತ್ ಕುಮಾರ್ ಬ್ಯಾಗ್ ತೆಗೆದು ನೋಡಿ ಸ್ಟೋರ್ ರೂಮಿನಲ್ಲಿ ಇಡುವ ದೃಶ್ಯಾವಳಿ ಕಂಡುಬಂದಿತು.

ಪೋನ್ ಮಾಡಿ ಆತನಿಗೆ ಹಣದ ಬ್ಯಾಗ್ ಬಗ್ಗೆ ವಿಚಾರ ಮಾಡಿದಾಗ ಯಾವುದೇ ಬ್ಯಾಗ್, ನಗದು ಹಣ ನಾನು ತೆಗೆದುಕೊಂಡಿಲ್ಲವೆಂದು ಹೇಳಿ ಪೋನ್ ಕಟ್ ಮಾಡಿದ್ದನು. ಅಲ್ಲದೆ ಬೆಳಿಗ್ಗೆ ಹೊಟೇಲ್ ಕೆಲಸಕ್ಕೂ ಬಂದಿರಲಿಲ್ಲ. ಆದ್ದರಿಂದ ಹಣ ಕಳ್ಳತನ ಮಾಡಿದ ಹೇಮಂತ್ ಕುಮಾರ್ ಮೇಲೆ ಪ್ರಕರಣ ದಾಖಲಿಸಿದ್ದರು.

ಪೊಲೀಸರ ತಂಡ ಪ್ರಕರಣದ ಆರೋಪಿತ ಹೇಮಂತ್ ಕುಮಾರ್ ಅಲಿಯಾಸ್ ಹೇಮಂತ್ (40) ಈತ ವಾಸವಿರುವ ಅಶೋಕನಗರದ ಮನೆಗೆ ತೆರಳಿ ದಸ್ತಗಿರಿ ಮಾಡಿ, ಆತನಿಂದ ನಗದು ಹಣ ವಶಪಡಿಸಿಕೊಂಡಿದ್ದಾರೆ.


Share It

You cannot copy content of this page