ಬೆಂಗಳೂರು: ಬ್ಯೂಟಿ ಪಾರ್ಲರ್ ಮಳಿಗೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು, ಇಡೀ ಕಟ್ಟ ಹೊತ್ತಿ ಉರಿದ ಘಟನೆ ನಾಗರಬಾವಿಯಲ್ಲಿ ನಡೆದಿದೆ.
ನಾಗರಬಾವಿ ಜಸ್ಟ್ ಬೇಕ್ ಮೇಲಿರುವ ಬ್ಯೂಟಿ ಪಾರ್ಲರ್ನಲ್ಲಿ ಬೆಂಕಿ 2 ನೇ ಮಹಡಿಗೆ ಆವರಿಸಿದೆ. ಅವಘಡದಲ್ಲಿ ಬ್ಯೂಟಿ ಪಾರ್ಲರ್ನಲ್ಲಿ ಲಕ್ಷಾಂತರ ಬೆಲೆಬಾಳುವ ಉಪಕರಣಗಳು ಸುಟ್ಟು ಕರಕಲಾಗಿವೆ. ಬೆಂಕಿ ಹೊತ್ತಿಕೊಂಡಿದ್ದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅನ್ನಪೂರ್ಣಏಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

