ದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಜೊತೆ ಚುನಾವಣಾಪೂರ್ವ ಮೈತ್ರಿ ಮಾಡಿಕೊಂಡ ಪರಿಣಾಮ ದೆಹಲಿ ರಾಜ್ಯದಲ್ಲಿ ಆಡಳಿತ ಪಕ್ಷ ಆಮ್ ಆದ್ಮಿ ಪಕ್ಷ 7 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿಯಿಂದ ಹೀನಾಯ ಸೋಲು ಕಂಡಿದೆ.
ಇದರಿಂದ ಜರ್ಜರಿತವಾಗಿರುವ ಎಎಪಿ ಪಕ್ಷ ಮುಂದೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಎಎಪಿಯ ದೆಹಲಿಯಲ್ಲಿ ಸಚಿವ ಗೋಪಾಲ್ ರೈ ಕಡ್ಡಿಮುರಿದಂತೆ ಹೇಳಿದ್ದಾರೆ.


