ಉಪಯುಕ್ತ ಸುದ್ದಿ

ಈ ಟೀವಿ ಸಂಸ್ಥಾಪಕರು, ರಾಮೋಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ರಾಮೋಜಿ ರಾವ್ ನಿಧನ

Share It

ಹೈದರಾಬಾದ್​: ರಾಮೋಜಿ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ರಾಮೋಜಿ ರಾವ್ (87) ಅವರು ಶನಿವಾರ ಮುಂಜಾನೆ ನಿಧನ ಹೊಂದಿದ್ದಾರೆ.

ಇತ್ತೀಚೆಗಷ್ಟೇ ಆರೋಗ್ಯ ಸಮಸ್ಯೆಯಿಂದಾಗಿ ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಇದೇ 5ರಂದು ಆಸ್ಪತ್ರೆಗೆ ದಾಖಲಾಗಿದ್ದ ಶ್ರೀ ರಾವ್ ಅವರು ಶನಿವಾರ ಬೆಳಗಿನ ಜಾವ 4:50ಕ್ಕೆ ನಿಧನರಾದರು. ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಾಹಿತಿ ಪ್ರಕಾರ, ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿರುವ ಅವರ ನಿವಾಸಕ್ಕೆ ಕರೆತರಲಾಗುತ್ತಿದೆ. ಅಲ್ಲಿ ಕುಟುಂಬ, ಸ್ನೇಹಿತರು ಮತ್ತು ಹಿತೈಷಿಗಳು ಅಗಲಿದ ಚೇತನಕ್ಕೆ ಅಂತಿಮ ನಮನ ಸಲ್ಲಿಸಲಿದ್ದಾರೆ.


Share It

You cannot copy content of this page