ಬೆಂಗಳೂರು: ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿ ಹಿರಿಯ ಕೆಎಎಸ್ ಶ್ರೇಣಿಯ ಅಧಿಕಾರಿ ಡಾ.ಕವಿತಾ ಯೋಗಪ್ಪನವರ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ಈ ಕುರಿತು ಹೊರಡಿಸಿರುವ ಆದೇಶದಲ್ಲಿ ಡಾ.ಕವಿತಾ ಯೋಗಪ್ಪನವರ್ ಅವರನ್ನು ಶಿವಮೊಗ್ಗದ ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಕ ಮಾಡಿರುವುದಾಗಿ ತಿಳಿಸಿದ್ದಾರೆ.
ಡಾ. ಕವಿತಾ ಯೋಗಪ್ಪನವರ್ ಅವರು, ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿಯಾಘಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಡಾ. ಶಿವರಾಮ ಕಾರಂತ ಬಡಾವಣೆಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಕಗೊಂಡಿದ್ದಾರೆ.

