ರಾಜಕೀಯ ಸುದ್ದಿ

ಸಚಿವ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಸ್ಥಾನ

Share It

ನವದೆಹಲಿ: ಕರ್ನಾಟಕದ ಐವರು ಸಂಸದರಿಗೆ ನರೇಂದ್ರ ಮೋದಿ ಅವರು ಮೂರನೇ ಅಧಿಕಾರವಧಿಯ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತವಾದಂತಾಗಿದೆ.

ಈ ಕುರಿತು ಸಂಸದ ವಿ.ಸೋಮಣ್ಣ ಮಾತನಾಡಿದ್ದು, ನನಗೂ ಸೇರಿದಂತೆ ಐವರಿಗೆ ಸ್ಥಾನ ನೀಡಲು ಹೈಕಮಾಂಡ್ ತೀರ್ಮಾನಿಸಿದೆ. ನಿರ್ಮಲಾ ಸೀತಾರಾಮನ್,
ಪ್ರಹ್ಲಾಜ್ ಜೋಷಿ, ಶೋಭಾ ಕರಂದ್ಲಾಜೆ, ಎಚ್.ಡಿ. ಕುಮಾರಸ್ವಾಮಿ ಹಾಗೂ ನಾನು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

ಈ ಕುರಿತು ವಿಧಾನ ಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕೂಡ ಮಾತನಾಡಿದ್ದು, ಸಂಪುಟದಲ್ಲಿ ಸ್ಥಾನ ಪಡೆದಿರುವ ಎಲ್ಲ ಐವರು ಸಂಸದರಿಗೆ ಅಭಿನಂದನೆಗಳು, ಕರ್ನಾಟಕಕ್ಕೆ ಐದು ಸಚಿವ ಸ್ಥಾನಗಳನ್ನು ನೀಡುವ ಮೂಲಕ ಬಿಜೆಪಿ ನಾಡಿನ ಜನರ ನಿರೀಕ್ಷೆಯನ್ನು ಉಳಿಸಿಕೊಂಡಿದೆ ಎಂದು ತಿಳಿಸಿದ್ದಾರೆ.

ಸಚಿವ ಸ್ಥಾನ ಫೈನಲ್
ನಿರ್ಮಲಾ ಸೀತಾರಾಮನ್, ರಾಜ್ಯಸಭೆ ಸದಸ್ಯೆ
ಪ್ರಹ್ಲಾಜ್ ಜೋಷಿ, ಹುಬ್ಬಳ್ಳಿ-ಧಾರವಾಡ ಸಂಸದ
ಶೋಭಾ ಕರಂದ್ಲಾಜೆ, ಬೆಂಗಳೂರು ಉತ್ತರ ಸಂಸದೆ
ವಿ.ಸೋಮಣ್ಣ, ತುಮಕೂರು ಸಂಸದ
ಎಚ್.ಡಿ. ಕುಮಾರಸ್ವಾಮಿ, ಮಂಡ್ಯ ಸಂಸದ


Share It

You cannot copy content of this page