ರಾಜಕೀಯ ಸುದ್ದಿ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಿಲೇಶ್ ಯಾದವ್

Share It

ಲಕ್ನೋ: ಇತ್ತೀಚೆಗೆ ಉತ್ತರಪ್ರದೇಶದ ಕನೌಜ್ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದಿಂದ ಸಂಸದರಾಗಿದ್ದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಇಂದು ಕರ್ಹಾಲ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಇದಕ್ಕೂ ಮುನ್ನ ನಮನ ನಿನ್ನೆ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ್ದ ಅಖಿಲೇಶ್ ಯಾದವ್ ತಾವು ಸಂಸದನಾಗಿ ಆಯ್ಕೆಯಾದ ಕಾರಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಬುಧವಾರ ಉತ್ತರ ಪ್ರದೇಶ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ದುಬೆ ಅವರಿಗೆ ಕರ್ಹಾಲ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು.


Share It

You cannot copy content of this page