ಅಪರಾಧ ರಾಜಕೀಯ ಸುದ್ದಿ

ದರ್ಶನ್ ಮೇಲೆ ಕೊಲೆ ಆರೋಪ : ಸಿಎಂ, ಗೃಹ ಸಚಿವರ ಸಭೆ

Share It


ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅರೆಸ್ಟ್ ಮತ್ತು ಕೆಲ ಹೈಪ್ರೊಪೈಲ್ ಪ್ರಕರಣದ ನಿರ್ವಹಣೆ ಕುರಿತಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪ್ರತ್ಯೇಕ ಸಭೆ ನಡೆಸಿದ್ದಾರೆ.

ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧಿಸಲಾಗಿದ್ದು, ಅವರ ವಿರುದ್ಧ ನಡೆಯುತ್ತಿರುವ ತನಿಖೆ ಕುರಿತು ಸಾರ್ವಜನಿಕ ವಲಯದಲ್ಲಿ ಅನುಮಾನಗಳು ವ್ಯಕ್ತವಾಗುತ್ತಿದೆ. ಕೆಲ ರಾಜಕಾರಣಿಗಳು ದರ್ಶನ್ ಬಚಾವು ಮಾಡಲು ಪ್ರಯತ್ನ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಮತ್ತು ಪರಮೇಶ್ವರ ಅವರು ಚರ್ಚೆ ನಡೆಸಿದ್ದಾರೆ.

ದರ್ಶನ್ ಪ್ರಕರಣದಲ್ಲಿ ಸರಕಾರದ ಮೇಲೆ ಮತ್ತು ಪೊಲೀಸ್ ಇಲಾಖೆಯ ಮೇಲೆ ಸಾರ್ವಜನಿಕ ವಲಯದಲ್ಲಿ ಅನುಮಾನ ಮಾಡುವಂತಹ ಯಾವುದೇ ಘಟನೆ ನಡೆಯಬಾರದು, ಜತೆಗೆ ಸರಕಾರದ ಯಾವುದೆ ಸಚಿವರು, ಶಾಸಕರು ತನಿಖೆಯಲ್ಲಿ ಹಸ್ತಕ್ಷೇಪ ಮಾಡದಂತೆ ನೋಡಿಕೊಳ್ಳಬೇಕು ಎಂಬ ಬಗ್ಗೆ ಈ ಇಬ್ಬರು ನಾಯಕರು ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

ಜತೆಗೆ ಕಳೆದ ಒಂದು ವಾರದಿಂದ ಮೂರ್ನಾಲ್ಕು ದಿನದಿಂದ ಹೈಪ್ರೊಪೈಲ್ ಪ್ರಕರಣಗಳು ಹೆಚ್ಚಾಗುತ್ತಿವೆ‌. ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಬಂಧಿಸುವ ಅನಿವಾರ್ಯತೆ ಇದ್ದು, ಇದು ಸರಕಾರದ ಮೇಲೆ ಯಾವ ರೀತಿ ಪರಿಣಾಮ ಬೀರಬಹುದು ಎಂಬುದನ್ನು ಈ ಸಂದರ್ಭದಲ್ಲಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಜತೆಗೆ ಕೆಲ ನಟ ನಟಿಯರ ಡೈವೋರ್ಸ್ ಪ್ರಕರಣಗಳು ಸಾರ್ವಜನಿಕ ಚರ್ಚೆಗೆ ಬರುತ್ತಿವೆ. ಪ್ರಜ್ವಲ್ ಪ್ರಕರಣ ಮುಂದೆ ಮತ್ತಷ್ಟು ತಿರುವು ಪಡೆಯಬಹುದು. ಈ ಎಲ್ಲ ಬೆಳವಣಿಗೆಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಗೆ ಧಕ್ಕೆ ತರುವ ಪರಿಸ್ಥಿತಿ ನಿರ್ಮಾಣ ಮಾಡಬಹುದು. ಹೀಗಾಗಿ, ಇದಕ್ಕೆಲ್ಲ ಕಡಿವಾಣ ಹಾಕುವ ಸಲುವಾಗಿ ತೆಗೆದುಕೊಳ್ಳುವ ಕ್ರಮಗಳೇನು ಎಂಬ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.


Share It

You cannot copy content of this page