ಚಿತ್ರದುರ್ಗ: ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಮಗು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಒಂದು ಮಗು ಮತ್ತು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಐವರಿಗೆ ಗಂಭಿರ ಗಾಯಗಳಾಗಿವೆ. ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಭರಮಸಾಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

