ಬೆಂಗಳೂರು: ಗದಗ-ಹಾವೇರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದರು.
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಅವರ ಕಚೇರಿಯಲ್ಲಿ ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದರು. ಮಾಜಿ ಮುಖ್ಯಮಂತ್ರಿಯೂ ಆದ ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರದಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಇದೀಗ, ಗದಗ-ಹಾವೇರಿ ಕ್ಷೇತ್ರದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದು, ಬೊಮ್ಮಾಯಿ ಅವರ ಜತೆಯಲ್ಲಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ, ಶಾಸಕರಾದ ಎಸ್. ಮುನಿರಾಜು, ಜೆಡಿಎಸ್ ರಾಜ್ಯಾಧ್ಯಕ್ಷ ಜಿ.ಟಿ. ದೇವೇಗೌಡ ಇದ್ದರು.

