ಕಲಬುರಗಿ: ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ ಮಾಡುಲ್ಲು ಮುಂದಾದ ರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿ ನಗರದ ಖಾದ್ರಿ ಚೌಕ್ ಬಳಿ ಘಟನೆ ನಡೆದಿದ್ದು, ರಾಮ್ ಸೇನೆ ಕಾರ್ಯಕರ್ತರು ಹಾಗೂ ಹಿಂದೂ ಕಾರ್ಯಕರ್ತರ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋವುಗಳ ರಕ್ಷಣೆಗೆ ಮುಂದಾಗಿದ್ದಾರೆ ಈ ವೇಳೆ ಸ್ಥಳಕ್ಕೆ ಗುಂಪು ಕಟ್ಟಿಕೊಂಡು ಬಂದ ಕೆಲ ಮುಸ್ಲಿಂ ಸಮುದಾಯದ ಯುವಕರು ಹಿಂದು ಕಾರ್ಯಕರ್ತರ ಮೇಲೆ ಹಲ್ಲೆ ಕಲ್ಲು ತೂರಾಟ, ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಬಕ್ರಿದ್ ಹಿನ್ನಲೆ ಖಾದ್ರಿ ಚೌಕ್ ಬಳಿ ಕಸಾಯಿ ಖಾನೆಗೆ ಗೋವುಗಳನ್ನು ಸಾಗಿಸುತ್ತಿದ್ದರು. ಆಳಂದ ಕಾಲೋನಿ ಬಳಿ ಟಂ ಟಂ ಹಾಗೂ ಪಿಕ್ ವಾಹನ ತಡೆದಿದ್ದಕ್ಕೆ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಲ್ಲಿ ರಮೇಶ್ ದೇಸಾಯಿ, ಹಾಗೂ ಮಹಾದೇವ್ ಎನ್ನುವರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

