ಅಪರಾಧ ರಾಜಕೀಯ ಸುದ್ದಿ

ಪೋಕ್ಸೊ ಕೇಸ್: ಕೊನೆಗೂ ಸಿಐಡಿ ವಿಚಾರಣೆಗೆ ಹಾಜರಾಗಲು ಯಡಿಯೂರಪ್ಪ ನಿರ್ಧಾರ

Share It

ಬೆಂಗಳೂರು: ಬರೋಬ್ಬರಿ 3 ತಿಂಗಳ ಬಳಿಕ ಮಾಜಿ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರು ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆಗೆ ಇಂದು ಹಾಜರಾಗುತ್ತಿದ್ದಾರೆ.

ಕಳೆದ ಮಾರ್ಚ್ 14 ರಂದು ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಅಪ್ತಾಪ್ತ ಬಾಲಕಿ ಮೇಲೆ ತಮ್ಮ ಡಾಲರ್ಸ್ ಕಾಲೋನಿಯ ಮನೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿಯ ತಾಯಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿತ್ತು.

ಬಳಿಕ ರಾಜ್ಯಸರ್ಕಾರ ಈ ಪ್ರಕರಣದ ವಿಚಾರಣೆ ನಡೆಸಲು ಸಿಐಡಿಗೆ ಪ್ರಕರಣವನ್ನು ಹಸ್ತಾಂತರಿಸಿತ್ತು.
ಸಿಐಡಿ ತನಿಖಾ ತಂಡ ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗಲು 2 ಬಾರಿ ನೋಟಿಸ್ ನೀಡಿತ್ತು. ‌ ಆದರೆ 2 ಬಾರಿಯೂ ಯಡಿಯೂರಪ್ಪ ಅವರು ಸಿಐಡಿ ವಿಚಾರಣೆಗೆ ಹಾಜರಾಗಿರಲಿಲ್ಲ.

ಈ ಹಿನ್ನೆಲೆಯಲ್ಲಿ ಸಿಐಡಿ ಯಡಿಯೂರಪ್ಪ ಅವರಿಗೆ ಬಂಧನದ ವಾರಂಟ್ ಜಾರಿಗೊಳಿಸಿತ್ತು. ಆದರೆ ನಿನ್ನೆ ಹೈಕೋರ್ಟ್ ಸಿಐಡಿಯ ಈ ಕ್ರಮವನ್ನು ಕಾನೂನು ಬಾಹಿರ ಎಂದು ಆಕ್ಷೇಪಿಸಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಗೌರವದಿಂದ ನಡೆಸಿಕೊಂಡು ವಿಚಾರಣೆ ನಡೆಸಿ ಎಂದು ತಪಾರಕಿ ಕೊಟ್ಟಿತ್ತು.

ಈ ಹಿನ್ನೆಲೆಯಲ್ಲಿ ಖುದ್ದು ಯಡಿಯೂರಪ್ಪ ಅವರೇ ಇಂದು ಬೆಂಗಳೂರಿನ ಸಿಐಡಿ ಕಚೇರಿಗೆ ಬಂದು ಪೋಕ್ಸೊ ಪ್ರಕರಣದ ವಿಚಾರಣೆ ಎದುರಿಸಲು ಮುಂದಾಗಿದ್ದಾರೆ. ಆದಾಗ್ಯೂ ತನ್ನ ಅಪ್ರಾಪ್ತ ಪುತ್ರಿ ಮೇಲೆ ಯಡಿಯೂರಪ್ಪ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಿದ್ದ ಬಾಲಕಿಯ ತಾಯಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.‌


Share It

You cannot copy content of this page