ರಾಜಕೀಯ ಸುದ್ದಿ

ಪ್ರತಿಭಟನೆ ವೇಳೆಯಲ್ಲಿ ಕುಸಿದು ಬಿದ್ದು ಬಿಜೆಪಿ ಮುಖಂಡ ಭಾನುಪ್ರಕಾಶ್ ಸಾವು

Share It

ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ಸಾವು

ಶಿವಮೊಗ್ಗ : ಬಿಜೆಪಿ ಹಿರಿಯ ಮುಖಂಡ ಮತ್ತೂರಿನ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದರು. ಅವರಿಗೆ 69 ವರ್ಷ ವಯಸ್ಸಾಗಿತ್ತು.

ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ತೆರಳುತ್ತಿದ್ದ ವೇಳೆ ಭಾನುಪ್ರಕಾಶ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

2009 ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಅವರು, 2013-19 ರವರೆಗೆ ಎಂಎಲ್ ಸಿಯಾಗಿದ್ದರು. ಪಕ್ಷ ಸಂಘಟನೆಯಲ್ಲಿ ಅವರ ಕೊಡುಗೆ ಅಪಾರ‌‌‌ವಿದ್ದು, ಪಕ್ಷದ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.‌

ಗಾಜನೂರು ಜಿ.ಪಂ. ಕ್ಷೇತ್ರದಿಂದ ಆಯ್ಕೆಯಾಗಿದ್ದ ಭಾನುಪ್ರಕಾಶ್ 2001ರಿಂದ 2005ರ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಬಿಜೆಪಿ ತೊರೆದು ಸಮಾಜವಾದಿ ಪಕ್ಷದಿಂದ ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಸ್ಪರ್ಧಿಸಿದ್ದಾಗ ಬಿಜೆಪಿಯಿಂದ ಅವರಿಗೆ ಎದುರಾಳಿಯಾಗಿ ಸ್ಪರ್ಧೆ ಮಾಡಿದ್ದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಟ್ಟಾ ಅನುಯಾಯಿಯಾಗಿದ್ದ ಭಾನುಪ್ರಕಾಶ್, ತಮ್ಮ ಮಾತುಗಾರಿಕೆ, ಸರಳತೆಯಿಂದಲೇ ಗುರುತಿಸಿಕೊಂಡವರು.

ಸಂಜೆ 6 ಗಂಟೆಗೆ ಭಾನುಪ್ರಕಾಶ್ ಅಂತ್ಯಕ್ರಿಯೆ

ಮಾಜಿ ಎಂಎಲ್ ಸಿ ಭಾನುಪ್ರಕಾಶ್ ಅವರ ಅಂತ್ಯಕ್ರಿಯೆ ಇಂದು ಸಂಜೆ 6 ಗಂಟೆಗೆ ಮತ್ತೂರಿನ ತುಂಗನದಿಯ ದಡದಲ್ಲಿ ನಡೆಯಲಿದೆ. ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.
ಈಗಾಗಲೇ ಮ್ಯಾಕ್ಸ್ ಆಸ್ಪತ್ರೆಯಿಂದ ಕರೆತಂದು ಮತ್ತೂರಿನ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕಾಂಗ್ರಶ್ ನ ಶ್ರೀಕಾಂತ್ ಅಂತಿಮ ದರ್ಶನ ಪಡೆದಿದ್ದಾರೆ. ಬಿಹೆಪಿ ನಾಯಕರು ಅಂತಿಮ ದರ್ಶನ ಪಡೆಯುವ ನಿರೀಕ್ಷೆ ಇದೆ.

ಸ್ಥಳದಲ್ಲಿ ಆರ್ ಎಸ್ ಎಸ್ ನ ದಕ್ಷಿಣ ಪ್ರಾಂತ್ಯದ ಮುಖಂಡ ಪಟ್ಟಾಭಿರಾಮ್, ಶಾಸಕ ಚೆನ್ನಬಸಪ್ಲ ಸ್ಥಳದಲ್ಲೇ ಇದ್ದು ಮುಂದಿನ ಕಾರ್ಯಕ್ಕೆ ಅಣಿಯಾಗಿದ್ದಾರೆ. 4 ಗಂಟೆಗೆ ಮತ್ತೂರಿನಲ್ಲಿ ಶ್ರದ್ಧಾಂಜಲಿ ಸಭೆ ನಡೆಯಲಿದೆ.

62 ವರ್ಷದ ಭಾನುಪ್ರಾಶ್ ಬಿಕಾಂ ಪದವೀಧರರಾಗಿದ್ದರು. ಯಾದವ್ ಕೃಷ್ಣ, ಹರಿಕೃಷ್ಣ ಇಬ್ಬರೂ ಇಂಜಿನಿಯರ್ ಮುಗಿಸಿದ್ದರೆ ಮೂರನೇ ಮಗ ಚಿನ್ಮಯ್ ಪ್ರಸನ್ನ ಕೃಷ್ಣ ಬಿಇ ವಿದ್ಯಾರ್ಥಿ ಆಗಿದ್ದಾರೆ. ಮಗ ಚಿನ್ಮಯ್ ಚೆನ್ನೈನಲ್ಲಿದ್ದು, ಅವರ ಆಗಮನಕ್ಕೆ ಕಾಯಲಾಗುತ್ತಿದೆ. ಅವರು ಬರುತ್ತಿದ್ದಂತೆ ಅಂತ್ಯಕ್ರಿಯೆ ನಡೆಯಲಿದೆ.


Share It

You cannot copy content of this page