ಹುಣಸಗಿ: ತಾಲೂಕಿನ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಾಳೆ ದಿನಾಂ19Jun2024 ರ ಬುಧವಾರದಂದು ಜನ ಸ್ಪಂದನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಅಲ್ಲದೇ ತಾಲೂಕಿನ ಸಾರ್ವಜನಿಕರ ಕುಂದು ಕೊರತೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯಾದಗಿರಿ ಜಿಲ್ಲಾಧಿಕಾರಿಗಳಾದ ಸುಶಿಲಾ ಬಿ, ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪೋಲಿಸ್ ವರಿಷ್ಠಾಧಿಕಾರಿಗಳು, ಜಂಟಿಯಾಗಿ ತಾಲೂಕು ಮಟ್ಟದಲ್ಲಿ ಜನ ಸ್ಪಂದನ ಕಾರ್ಯಕ್ರಮ ಆಯೋಜಿಸಿ ಸಾರ್ವಜನಿಕರಿಂದ ಸ್ವೀಕೃತವಾದ ಒಟ್ಟು ಮನವಿ / ಕೋರಿಕೆಗಳ ಮೇಲೆ ಕ್ರಮ ಕೈಗೊಂಡು ವರದಿಯನ್ನು ಸಲ್ಲಿಸಲು ಸೂಚಿಸಿರುತ್ತಾರೆ.
ಹಾಗಾಗಿ ತಾಲೂಕಿನ ರೈತರು ಹಾಗೂ ಸಾರ್ವಜನಿಕರು ತಮ್ಮ ಏನೇ ಸಮಸ್ಯೆ ಇದ್ದರೂ ನಾಳೆ ನಡೆಯುವ ಜನ ಸ್ಪಂದನ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುಬಹುದು ಎಂದರು.
ಈ ಒಂದು ಕಾರ್ಯಕ್ರದಲ್ಲಿ ತಾಲೂಕಿನ ಎಲ್ಲಾ ಕಚೇರಿಯ ಅನುಷ್ಠಾನ ಅಧಿಕಾರಿಗಳು ಕಡ್ಡಾಯವಾಗಿ ಹಾಜರು ಇರಬೇಕೆಂದು ತಹಸೀಲ್ದಾರ ಬಸಲಿಂಗಪ್ಪ ನೈಕೋಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

