ರಾಜಕೀಯ ಸುದ್ದಿ

ಪೆಟ್ರೋಲ್- ಡೀಸಲ್ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ.

Share It

ದೇವನಹಳ್ಳಿ: ಲೋಕಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿರುವುದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ರಾತ್ರೋರಾತ್ರಿ ಹೆಚ್ಚಿಸಿ ರಾಜ್ಯದ ಜನರ ವಿರುದ್ದ ಕಾಂಗ್ರೆಸ್ ದ್ವೇಷದ ಆಡಳಿತ ನಡೆಸುತ್ತಿದೆ ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಲು ಅಗತ್ಯ ವಸ್ತುಗಳ ಬೆಲೆಗಳನ್ನು ಹೆಚ್ಚಿಸಿ ಜನ ಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ತಳ್ಳಿದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಸರ್ಕಾರ ಹಿಂದೆ ಸರಿಯುವವರೆಗೂ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಕೆ ಸುಧಾಕರ್ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ಹೆಚ್ಚು ಮಾಡುವುದರಿಂದ ದಿನ ಬಳಕೆಯ ಅಗತ್ಯ ವಸ್ತುಗಳ ಬೆಲೆಯು ಹೆಚ್ಚಾಗಲಿದೆ ವಿಧಾನಸಭಾ ಚುನಾವಣೆಯಲ್ಲಿ ಅಂದಿನ ನಮ್ಮ ಸರ್ಕಾರವನ್ನು ಟೀಕಿಸಿ ಗ್ಯಾಸ್ ಸಿಲಿಂಡರ್ ಗೆ ಪೂಜೆ ಮಾಡಿ ಮತಯಾಚನೆ ಮಾಡಿ ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡುತ್ತೇವೆ ಎಂದು ಜನರಿಗೆ ಸುಳ್ಳು ಹೇಳಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಜನರ ನಿತ್ಯ ಬಳಕೆಗೆ ಅಗತ್ಯವಾದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯನ್ನು ಏರಿಕೆ ಮಾಡಿರುವುದು ಖಂಡನೀಯ ಇದರಿಂದಾಗಿ ಮುಂದಿನ ದಿನಗಳಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಮತ್ತಷ್ಟು ದುಬಾರಿಯಾಗಲಿದೆ.

ಈ ಸರ್ಕಾರಕ್ಕೆ ನೈತಿಕತೆ ಇದ್ದರೆ ಈ ಕೂಡಲೇ ಬೆಲೆ ಏರಿಕೆಯ ನಿರ್ಧಾರವನ್ನು ಕೈಬಿಡಬೇಕು ಗ್ಯಾರಂಟಿ ಯೋಜನೆಗಳಿಂದ ಜನರ ಹಾದಿ ತಪ್ಪಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಖಜಾನೆಯನ್ನು ಖಾಲಿ ಮಾಡಿ ಅಭಿವೃದ್ಧಿ ಯೋಜನೆಗಳನ್ನು ಮಾಡಲಾಗದೆ ಆಡಳಿತ ನಡೆಸಲು ಹೆಣಗಾಡುತ್ತಿದೆ ದಿಢೀರ್ ಬೆಲೆ ಏರಿಕೆಯ ಕ್ರಮದಿಂದ ಸರ್ಕಾರ ರಾಜ್ಯದ ಜನರ ನಂಬಿಕೆ ವಿಶ್ವಾಸ ಕಳೆದುಕೊಂಡಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎಂಟಿಬಿ ನಾಗರಾಜ್, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಮಾಜಿ ಶಾಸಕರುಗಳಾದ ಪಿಳ್ಳ ಮುನಿಶಾಮಪ್ಪ, ಚಂದ್ರಣ್ಣ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಎಚ್ ಎಂ ರವಿ ಕುಮಾರ್‌, ತಾಲೂಕು ಅಧ್ಯಕ್ಷ ಸುಂದರೇಶ್, ನೀಲೇರಿ ಮಂಜುನಾಥ್, ರಾಮೇಗೌಡ, ಗೋಪಿನಾಥ್ ಮುಂತಾದ ಮುಖಂಡರುಗಳು ಕಾರ್ಯಕರ್ತರುಗಳು ಇದ್ದರು.


Share It

You cannot copy content of this page