ಅಪರಾಧ ರಾಜಕೀಯ ಸುದ್ದಿ

ಸ್ಥಳೀಯ ಸಂಸ್ಥೆ ಅಧ್ಯಕ್ಷ, ಉಪಾಧ್ಯಕ್ಷರ ಮೇಲೆ 15 ತಿಂಗಳು ಅವಿಶ್ವಾಸ ಸಾಧ್ಯವಿಲ್ಲ

Share It

ಬೆಂಗಳೂರು: ಒಮ್ಮೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದರೆ, ಅವರ ವಿರುದ್ಧ ಅವಿಶ್ವಾಸ ಮಂಡನೆಗೆ ಕನಿಷ್ಠ 15 ತಿಂಗಳು ಸಾಧ್ಯವೇ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಗ್ರಾಮ ಪಂಚಾಯತ್ ಅಧ್ಯಕ್ಷರು ಅಥವಾ ಉಪಾಧ್ಯಕ್ಷರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದು, ಅನರ್ಹಗೊಳ್ಳುವುದು ಮತ್ತು ಮರಣವನ್ನಪ್ಪಿದಲ್ಲಿ ಅದೇ ಹುದ್ದೆಗೆ ಆಯ್ಕೆಯಾದವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕನಿಷ್ಠ 15 ತಿಂಗಳು ಕಳೆದಿರಬೇಕು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ರಾಜೀನಾಮೆ ಬಳಿಕ ಆಯ್ಕೆಯಾದ ಸದಸ್ಯರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು 15 ತಿಂಗಳು ಕಳೆದಿರಬೇಕು ಎಂಬುದಾಗಿ ಆದೇಶಿಸಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಯಲಹಂಕ ತಾಲೂಕಿನ ಬಾಗಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರೀತಿ ಮುನೇಗೌಡ ಮೇಲ್ಮನವಿ ಸಲ್ಲಿಸಿದ್ದರು.

“ಪಂಚಾಯತ್ ರಾಜ್‌ನಂತಹ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಿಶ್ವಾಸವೆಂಬ ಅಸ್ತ್ರ ಅಧಿಕಾರ ಕೂಗುಮಾರಿಗಳಿಂದ ಅಪಾಯಕಾರಿ ಎನಿಸಿಕೊಂಡಿದೆ. ಅನೈತಿಕ ರಾಜಕೀಯ ಹಿತಾಸಕ್ತಿ ಈಡೇರಿಸುವುದು ಮತ್ತು ಕ್ಷುಲ್ಲಕ ಕಾರಣಗಳಿಂದ ಅತೃಪ್ತಿ ಗುಂಪುಗಳಿಂದ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸುವ ಪ್ರವೃತ್ತಿಯನ್ನು ನಿಯಂತ್ರಿಸುವುದು ಪಂಚಾಯತ್ ರಾಜ್ ಕಾಯ್ದೆ ಸೆಕ್ಷನ್ 49(2)ರ ಮೂಲ ಉದ್ದೇಶವಾಗಿದೆ” ಎಂದು ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಆದೇಶಿದಿದೆ.

“ಪ್ರಸ್ತುತದ ಪ್ರಕರಣದಲ್ಲಿ 2023 ರ ಮಾರ್ಚ್ 7 ರಂದು ಅಧಿಕಾರ ವಹಿಸಿಕೊಂಡಿದ್ದು, ಪಂಚಾಯತ್ ರಾಜ್(ತಿದ್ದುಪಡಿ) ಕಾಯ್ದೆ 2021 ರ ಸೆಕ್ಷನ್ 49 ರ ಅಡಿಯಲ್ಲಿ ತಿಳಿಸಿರುವಂತೆ ಅಧಿಕಾರ ವಹಿಸಿಕೊಂಡ 15 ತಿಂಗಳ ಒಳಗಾಗಿ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶವಿಲ್ಲ” ಎಂದು ಪೀಠ ಹೇಳಿದೆ. “ಹೀಗಾಗಿ ೧೫ ತಿಂಗಳ ಕಾಲ ಅವಿಶ್ವಾಸ ನಿರ್ಣಯ ಮಂಡಿಸುವುದಕ್ಕೆ ಅವಕಾಶವಿರುವುದಿಲ್ಲ. ಆದ್ದರಿಂದ ಅಧ್ಯಕ್ಷರ ಚುನಾವಣೆ ದಿನಾಂಕದಿಂದ ಮೊದಲ 15 ತಿಂಗಳವರೆಗೂ ಅವಿಶ್ವಾಸ ನಿರ್ಣಯ ಮಂಡಿಸುವುದಕ್ಕೆ ನಿರ್ಬಂಧವಿರಲಿದೆ” ಎಂದು ಪೀಠ ತಿಳಿಸಿದೆ. ಅಲ್ಲದೆ,


Share It

You cannot copy content of this page