ರಾಜಕೀಯ ಸುದ್ದಿ

ದೆಹಲಿ ಅಬಕಾರಿ ನೀತಿ ಹಗರಣ: ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ‌ಮಂಜೂರು!

Share It

ನವದೆಹಲಿ: 2021-22ರ ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಇಂದು ಜಾಮೀನು ಮಂಜೂರಾಗಿದೆ.

ನಿನ್ನೆ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಇಂದಿಗೆ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ರೋಸ್ ಅವೆನ್ಯೂ ಕೋರ್ಟ್ ನ್ಯಾಯಾಧೀಶರಾದ ನಿಯಯ್ ಬಿಂದು ಅವರು 2 ದಿನಗಳ ಕಾಲ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿ, ಇಂದು ಆದೇಶ ಪ್ರಕಟಿಸಿದರು.

ಇದರಿಂದ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬಹಳ ಸಂತೋಷದಿಂದ ಸೆಲೆಬ್ರೇಶನ್ ಆಚರಿಸುತ್ತಿದ್ದಾರೆ.


Share It

You cannot copy content of this page