ಹೆಜ್ಜಾಲ ಚೆಕ್ ಪೋಸ್ಟ್ ನಲ್ಲಿ ಭಾರಿ ಪ್ರಮಾಣದ ಚಿನ್ನಾಭರಣ ವಶ
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್ ಗಳಲ್ಲಿ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಸೂಕ್ತ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ 10 ಕೆಜಿ ಚಿನ್ನ, 5 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು-ಮೈಸೂರು ರಸ್ತೆಯ ಹೆಜ್ಜಾಲ ಬಳಿ ನಿರ್ಮಿಸಲಾಗಿರುವ ಚೆಕ್‌ಪೋಸ್ಟ್ ಬಳಿ ಇಂದು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾಗ ವಾಹನದಲ್ಲಿ ಚಿನ್ನವನ್ನು ಸಾಗಿಸುತ್ತಿರುವುದು ಕಂಡುಬಂದಿದ್ದು ಜಪ್ತಿ ಮಾಡಿದ್ದಾರೆ.
ಜಪ್ತಿ ಮಾಡಿಕೊಂಡಿರುವ ಚಿನ್ನಕ್ಕೆ ಸದ್ಯಕ್ಕೆ ಯಾವುದೇ ಸೂಕ್ತ ದಾಖಲೆ ಇಲ್ಲದಿರುವುದು ಪರಿಶೀಲನೆ ವೇಳೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.