ಚನ್ನರಾಯಪಟ್ಟಣ: ನಾಡಪ್ರಭು ಕೆಂಪೇಗೌಡ ಜಯಂತಿಯ ಪೂರ್ವಭಾವಿ ಸಭೆಯು ಇಂದು ಶಾಸಕ ಸಿಎನ್ ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಶಾಸಕ ಸಿಎನ್ ಬಾಲಕೃಷ್ಣ ಮಾತನಾಡಿ ಇದೇ ತಿಂಗಳು 27 ನೇ ತಾರೀಕು ನಾಡಪ್ರಭು ಕೆಂಪೇಗೌಡರವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು, ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 12 ಜನ ಸಾಧಕರನ್ನು ಗುರುತಿಸಿ ಗೌರವಿಸಲಾಗುವುದು. ತಾಲೂಕು ಒಕ್ಕಲಿಗ ಸಮಾಜದ ಏಳಿಗೆಗೆ ನಿವೇಶನವನ್ನು ಅತಿ ಶೀಘ್ರದಲ್ಲಿ ನೀಡಲಾಗುವುದು ಎಂದರು, ವಿವಿಧ ಕಲಾ ತಂಡಗಳೊಂದಿಗೆ ನಾಡ ಪ್ರಭು ಕೆಂಪೇಗೌಡರ ಭಾವಚಿತ್ರದೊಂದಿಗೆ ಪಟ್ಟಣದ ಆರ್ ಎಂ ಸಿ ಮುಂಭಾಗದಿಂದ ತಾಲೂಕು ಕಚೇರಿವರಗೆ ಬೃಹತ್ ಮೆರವಣಿಗೆ ನಡೆಸಲಾಗುವುದು. ಈ ಕಾರ್ಯಕ್ರಮಕ್ಕೆ ರಾಜ್ಯ ಒಕ್ಕಲಿಗರ ಸಂಘದಿಂದ 25,000 ರೂಪಾಯಿಗಳನ್ನು ಆರ್ಥಿಕ ಸಹಾಯ ನೀಡಲಾಗುವುದು ಎಂದು ತಿಳಿಸಿದರು, ಕಾರ್ಯಕ್ರಮಕ್ಕೆ ಆಗಮಿಸುವ 1000 ಮಂದಿಗೆ ಊಟ ಹಾಗೂ ಬಾಟಲಿ ನೀರಿನ ವ್ಯವಸ್ಥೆಯನ್ನು ಮಾಡಲಾಗುವುದು. ಈ ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು. ತಾಲೂಕು ಒಕ್ಕಲಿಗರ ಸಂಘದ ಎಲ್ಲಾ ಪದಾಧಿಕಾರಿಗಳು ಮುಂದೆ ನಿಂತು ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಪ್ರೇರಣೆ ನೀಡಬೇಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ ಎನ್ ಬಾಲಕೃಷ್ಣ, ತಾಲೂಕು ದಂಡಾಧಿಕಾರಿ ಬಿ ಎಂ ಗೋವಿಂದರಾಜು, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಜಿ ಆರ್ ಹರೀಶ್, ಡಿವೈಎಸ್ಪಿ ರವಿಪ್ರಸಾದ್, ಪೋಲಿಸ್ ವೃತ್ತ ನಿರೀಕ್ಷಕರಾದ ರಘುಪತಿ,ಪುರಸಭೆ ಮುಖ್ಯ ಅಧಿಕಾರಿ ಹೇಮಂತ್, ಶಿಕ್ಷಣ ಸಂಯೋಜಕರಾದ ಅನಿಲ್, ನಾಡಪ್ರಭು ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಕಾಳೆನಹಳ್ಳಿ ಆನಂದ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಚ್ಎನ್ ಲೋಕೇಶ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರಾದ ಜಯಪಾಲ್, ಗೌರವಾಧ್ಯಕ್ಷರಾದ ಶಿವೇಗೌಡ,ಮಕ್ಕಳ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಮಹಾದೇವ್,ಸಿ ಜಿ ಸೋಮಶೇಖರ್, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಕರೆಡೇವು ಮಧು, ಕನ್ನಡಪರ ಹೋರಾಟಗಾರ ಜನಿವಾರ ಶರತ್,ರೈತ ಸಂಘಟನೆ ಮುಖಂಡರಾದ ಮೀಸೆ ಮಂಜಣ್ಣ, ಉತ್ತೇನಹಳ್ಳಿ ಸಾಗರ್, ಸೇರಿದಂತೆ ಇತರರು ಹಾಜರಿದ್ದರು.

