ಬೆಂಗಳೂರು: ಚಿತ್ರದುರ್ಗದ ಅಭಿಮಾನಿ ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಮುಗಿದಿದ್ದು, ಇಂದಿನಿಂದ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.
ಈಗಾಗಲೇ ದರ್ಶನ್ ಗೆಳತಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಎರಡು ದಿನಗಳ ಹೆಚ್ಚುವರಿ ಕಸ್ಟಡಿಯಲ್ಲಿದ್ದ ನಟ ದರ್ಶನ್ ಮತ್ತು ನಾಲ್ಕು ಆರೋಪಿಗಳನ್ನು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದು, ನ್ಯಾಯಾಲಯ ಬಹುತೇಕ ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದೆ. ಹೀಗಾಗಿ, ದರ್ಶನ್ ಇಂದು ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.
2011 ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ನಡೆಸಿದ ಮಾರಣಾಂತಿಕ ಹಲ್ಲೆಯ ಕಾರಣಕ್ಕೆ ದರ್ಶನ್ ಜೈಲು ಸೇರಿದ್ದರು. ಇದೀಗ ತಮ್ಮ ಆಪ್ತ ಗೆಳತಿಗೆ ಮೆಸೇಜ್ ಮಾಡಿದ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬನನ್ನು ಕೊಲೆ ಮಾಡಿರುವ ಆರೋಪದಲ್ಲಿ ದರ್ಶನ್ ಜೈಲು ಸೇರಲಿದ್ದಾರೆ. ರೇಣುಕಾ ಸ್ವಾಮಿ ಮೇಲೆ ನಡೆಸಿರುವ ಹಲ್ಲೆ, ಪ್ರಕರಣದಿಂದ ತಪ್ಪಿಸಿಕೊಳ್ಳಲು ನಡೆಸಿರುವ ಪ್ರಯತ್ನ ಸೇರಿದಂತೆ ವಿವಿಧ ಆರೋಪಗಳಿವೆ.
ಜು.4 ರವರೆಗೆ ಜೈಲಿಗೆ ದರ್ಶನ್ !
24 ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಪೊಲೀಸರು ದರ್ಶನ್, ವಿನಯ್, ಪ್ರದೋಷ್ ಮತ್ತು ಧನರಾಜ್ ಎಂಬುವವರನ್ನು ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಈ ನಾಲ್ವರು ಆರೋಪಿಗಳನ್ನು ಜು.೪ರವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶ ಹೊರಡಿಸಿದೆ. ಹೀಗಾಗಿ, ದರ್ಶನ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ. ಈಗಾಗಲೇ ಕೊಲೆಯ ಇತರೆ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
updating…..
