ಬೆಂಗಳೂರು: ಅಸಹಜ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಎಚ್.ಡಿ.ರೇವಣ್ಣರ ಮತ್ತೊಬ್ಬ ಪುತರ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದು, ವಿಚಾರಣೆ ನಂತರ ಬಂಧನ ಮಾಡುವ ಸಾಧ್ಯತೆಯಿದೆ.
ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತನೊಬ್ಬನನ್ನು ತಮ್ಮ ತೋಟದ ಮನೆಗೆ ಕರೆಸಿಕೊಂಡು, ಆತನನ್ನು ಅಸಹಜ ಲೈಂಗಿಕ ಕೃತ್ಯಕ್ಕೆ ಬಳಸಿಕೊಂಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಮೇಲೆ ಹೊಳೇನರಸೀಪುರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೆಕ್ಷನ್ 377, 506, 342, 36 ರ ಅಡಿಯಲ್ಲಿ ದೂರು ದಾಖಲಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂರಜ್ಗೆ ನೊಟೀಸ್ ನೀಡಲಾಗಿದೆ.
ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಕುಮಾರ್ ಅವರು ಪ್ರಕರಣದ ತನಿಖಾಧಿಕಾರಿಯಾಗಿ ನೇಮಕವಾಗಿದ್ದಾರೆ. ಪ್ರಮೋದ್ ಕುಮಾರ್ ನೇತೃತ್ವದಲ್ಲಿ ಸೂರಜ್ ರೇವಣ್ಣ ವಿಚಾರಣೆ ಈಗಾಗಲೇ ಆರಂಭವಾಗಿದೆ ಎಂದು ಹೇಳಲಾಗುತ್ತಿದೆ. ವಿಚಾರಣೆ ನಂತರ ಸೂರಜ್ ರೇವಣ್ಣ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈಗಾಗಲೇ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿದ್ದಾರೆ. ಸೂರಜ್ ತಂದೆ, ಮಾಜಿ ಸಚಿವ ಎಚ್.ಡಿ.ರೇವಣ್ಣ ಜೈಲು ಸೇರಿ ನಂತರ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ಇನ್ನು ಭವಾನಿ ರೇವಣ್ಣ ಮೇಲೆ ಸಂತ್ರಸ್ತೆಯ ಕಿಡ್ನಾಪ್ ಮಾಡಿಸಿದ ಆರೋಪವಿದೆ. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಸಿಕ್ಕಿದ್ದು, ಅವರು ಕೂಡ ಬಂಧನದ ತೂಗುಗತ್ತಿಯ ಮೇಲಿದ್ದಾರೆ. ಹೀಗೆ, ರೇವಣ್ಣ ಅವರ ಇಡೀ ಕುಟುಂಬ ಲೈಂಗಿಕ ದೌರ್ಜನ್ಯಕ್ಕೆ ಸಂಬAಧಿಸಿದ ಆರೋಪದಿಂದ ಜರ್ಝರಿತವಾಗಿದೆ.
